ವೇಣೂರು | ನಿಯಂತ್ರಣ ತಪ್ಪಿ ಥಾರ್ ವಾಹನಕ್ಕೆ ಗುದ್ದಿದ ಖಾಸಗಿ ಬಸ್: ಜೀಪ್ ಚಾಲಕನಿಗೆ ಗಂಭೀರ ಗಾಯ

Date:

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

- Advertisement -

ಬೆಳ್ತಂಗಡಿ ಕಡೆಯಿಂದ ಮೂಡಬಿದಿರೆ ಭಾಗಕ್ಕೆ ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೇಣೂರಿನ‌ ಮೇಲಿನಪೇಟೆಯಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೂಡಬಿದಿರೆಯ ಭಾಗಕ್ಕೆ ಹೋಗಲು ಪ್ರಯಾಣಿಕರನ್ನು ತುಂಬಿಕೊಂಡು ಬೆಳ್ತಂಗಡಿ ಕಡೆಯಿಂದ ಬಂದಿದ್ದ ಶ್ರೀಕೃಷ್ಣ ಹೆಸರಿನ ಖಾಸಗಿ ಬಸ್, ವೇಣೂರು ಮೇಲಿನ ಪೇಟೆಯಲ್ಲಿರುವ ನಮನ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಬಸ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಳ್ತಂಗಡಿಯ ಭಾಗಕ್ಕೆ ತೆರಳುತ್ತಿದ್ದ ಥಾರ್ ಜೀಪ್‌ನ ಮುಂಭಾಗಕ್ಕೆ ನೇರವಾಗಿ ಬಡಿದಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಥಾರ್ ಜೀಪ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಕೂಡಲೇ ಮೂಡಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಜೆ 5.30ರ ಸುಮಾರಿಗೆ ನಡೆದಿರುವುದಾಗಿ ತಿಳಿದು ಬಂದಿದ್ದು, ಜೀಪ್ ಚಾಲಕನ ವಿವರ ಇನ್ನೂ ತಿಳಿದು ಬಂದಿಲ್ಲ. ಬಸ್‌ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

1002406451

ಅಪಘಾತದ ರಭಸಕ್ಕೆ ಥಾರ್ ಜೀಪ್‌ನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ‌ ಕೂಡಲೇ ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆಯ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ ವೇಣೂರು ಪೊಲೀಸ್ ಠಾಣಾಧಿಕಾರಿ ಶ್ರೀ ಶೈಲಾ, “ಥಾರ್ ಜೀಪ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಕೂಡಲೇ ಮೂಡಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ವಿವರವನ್ನು ಸಂಗ್ರಹಿಸುತ್ತಿದ್ದೇನೆ. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಬಸ್ ಚಾಲಕ ಸ್ಟೀರಿಂಗ್ ಜಾಮ್ ಆದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...