ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

Date:

ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುವಂತಹ ವಿವಾದಾತ್ಮಕ ಹೇಳಿಕೆ ನೀಡಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನನ್ವಯ ಸೆಕ್ಷನ್ 196(1)(a) ಹಾಗೂ 353(2) ಬಿ ಎನ್ ಎಸ್ ನಡಿ ದೂರು ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಂಗಳೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ್ ಗಿಳಿಯಾರ್, “ಬೆಳ್ತಂಗಡಿ ಭಾಗದಲ್ಲಿ ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿಕಟ್ಟೆಯನ್ನು ಒಡೆದು ಅಲ್ಲಿ ಶಿಲುಬೆಗಳನ್ನು ಇಡಲಾಗಿತ್ತು. ಗ್ರಾಮಾಭಿವೃದ್ಧಿ ಯೋಜನೆ ಬಂದ ಬಳಿಕ ಶಿಲುಬೆಗಳನ್ನು ತೆಗೆದು ಮತ್ತೆ ತುಳಸಿಕಟ್ಟೆಗಳನ್ನು ಮರು ಸ್ಥಾಪಿಸಲಾಗಿದೆ” ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಬಡವರ ಕೆಲಸದಲ್ಲಿ ಉದಾಸೀನತೆ ತೋರುವ ಅಧಿಕಾರಿಗಳ ಶೀಘ್ರ ವರ್ಗಾವಣೆ : ಶಾಸಕ ಅಶೋಕ್ ರೈ

ಈ ಹೇಳಿಕೆಯಿಂದ ಧರ್ಮಗಳ ನಡುವೆ ವೈಷಮ್ಯ ಬೆಳೆದು ಸಾಮಾಜಿಕ ಘರ್ಷಣೆಗೆ ಕಾರಣವಾಗುತ್ತದೆ ಎಂದು ಶೇಖರ್ ಲಾಯಿಲ ತಮ್ಮ ದೂರಿನಲ್ಲಿ ವಿವರಿಸಿದ್ದು, ಅದರಂತೆ ಪ್ರಕರಣ ದಾಖಲಿಸಿರುವುದಾಗಿ ಬೆಳ್ತಂಗಡಿ ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...