ಬೆಳ್ತಂಗಡಿ | ಸ್ಥಳೀಯ ಉದ್ಯೋಗಕ್ಕೆ ಆದ್ಯತೆ ನೀಡುವಂತೆ ಬೇಡಿಕೆ; ಡಿವೈಎಫ್ಐ ವತಿಯಿಂದ ಯುವಜನ ಜಾಥಾ

Date:

Advertisements

ʼಉದ್ಯೋಗ ಸೃಷ್ಟಿಸಿʼ, ʼಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿʼ ಸೇರಿದಂತೆ ಹಲವು ಘೋಷಣೆಗಳೊಂದಿಗೆ ಡಿವೈಎಫ್ಐ ನೇತೃತ್ವದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ ಅವರು ನೆರವೇರಿಸಿ ಮಾತನಾಡುತ್ತಾ, “ನಮ್ಮ ಜಿಲ್ಲೆಗೆ ಬಂದಿರುವ ಕೈಗಾರಿಕೆಗಳಿಂದಾಗಿ ನೆಲ, ಜಲ, ವಾಯು ಹಾಳಾಗುತ್ತಿದೆ. ಆದರೆ‌, ನಮ್ಮ ಯುವಕರಿಗೆ ಉದ್ಯೋಗಾವಕಾಶಗಳು ಮರೀಚಿಕೆಯಾಗಿ‌ಯೇ ಉಳಿದಿದೆ ಎಂಬುದು ದುರಂತ. ಅವಕಾಶಗಳ ಕೊರತೆಯಿಂದಾಗಿ ಯುವ ಸಮುದಾಯ ಅಭದ್ರತೆಯಲ್ಲಿ ಬದುಕುವಂತಾಗಿದೆ. ಡಿವೈಎಫ್ಐ ಹಮ್ಮಿಕೊಂಡಿರುವ ಈ ಜಾಥಾ ಯುವಜನರನ್ನು ಎಚ್ಚರಗೊಳಿಸುವ ಕಾರ್ಯ ಮಾಡಲಿ” ಎಂದರು.

WhatsApp Image 2025 09 08 at 3.54.19 PM

ಡಿವೈಎಫ್ಐ ದಕ್ಷಿಣ ಕ್ನ್ನಡ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, “ದ.ಕ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಕ್ಷುಬ್ದ ವಾತಾವರಣ ಯುವಜನರ ಮೇಲೆ ಗಾಢ ಪರಿಣಾಮವನ್ನು ಬೀರುತ್ತಿದೆ. ಜಿಲ್ಲೆಯಲ್ಲಿನ ಅಶಾಂತಿಯ ವಾತಾವರಣ ಜಿಲ್ಲೆಯನ್ನು ಅಭಿವೃದ್ದಿಯಿಂದ ಹಿಂದಕ್ಕೆ ಸರಿಸುತ್ತಿದೆ. ಉದ್ಯೋಗಗಳು ನಾಶವಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿ ಆಗಬೇಕಾದರೆ ಉದ್ಯೋಗಗಳು ಸೃಷ್ಟಿಯಾಗಬೇಕಾದರೆ ಮೊದಲು ಶಾಂತಿ ಸೌಹಾರ್ದತೆ ನೆಲೆಸುವಂತೆ ನೋಡಿಕೊಳ್ಳಬೇಕು” ಎಂದರು.

ಯುವಜನ ಜಾಥಾದ ನೇತೃತ್ವ ವಹಿಸಿದ್ದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಾಥಾದ ಉದ್ದೇಶ ಮತ್ತು ಸರಕಾರದ ಮುಂದಿಟ್ಟಿರುವ ಬೇಡಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಬೆಳ್ತಂಗಡಿಯಲ್ಲಿರುವ ತಾಲೂಕು ಕಚೇರಿ ಸಹಿತ ಸರಕಾರದ ವಿವಿಧ ಇಲಾಖೆಗಳಲ್ಲಿ ನೂರಾರು ಹುದ್ದೆಗಳು ಖಾಲಿ ಬಿದ್ದಿದೆ. ಇಲ್ಲಿನ ಪ್ರವಾಸೋದ್ಯಮಕ್ಕೆ ಯಾವ ಆಧ್ಯತೆಯೂ ನೀಡಿಲ್ಲ. ಜಮಲಾಬಾದ್ ನಂತಹ ಕೋಟೆಗಳು, ಪ್ರಾಕೃತಿಕ ಸೌಂದರ್ಯ ಹೊಂದಿರುವ ಹಲವಾರು ಜಲಪಾತಗಳು ಹಾಗೂ ಪಶ್ಚಿಮ ಘಟ್ಟಗಳನ್ನು ಪರಿಸರಕ್ಕೆ ಯಾವುದೇ ಅಡ್ಡಿಯಾಗದಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಅಭಿವೃದ್ಧಿಗೊಳಿಸಲು ಸಾಧ್ಯವಾದರೇ ಬೆಳ್ತಂಗಡಿ ಭಾಗದ ಯುವಜನರಿಗೆ ಹಲವು ಉದ್ಯೋಗಗಳು ಸೃಷ್ಡಿಯಾಗಲು ಸಾಧ್ಯವಾಗಲಿವೆ‌” ಎಂದರು.

ಇದನ್ನೂ ಓದಿ: ಬೆಳ್ತಂಗಡಿ | ಸಮಾವೇಶಗಳ ಮೂಲಕ ಹೃದಯಗಳ ಒಗ್ಗೂಡುವ ಕೆಲಸವಾಗಲಿ: ಚಾರುಕೀರ್ತಿ ಸ್ವಾಮೀಜಿ

ವೇದಿಕೆಯಲ್ಲಿ ಕೋಶಾಧಿಕಾರಿ ಮನೋಜ್ ವಾಮಂಜೂರು, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷಕಿರಣ ಪ್ರಭ, ಭಾರತ ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ, ಇನಾಸ್ ಬಿ ಕೆ, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ಅದಿತಿ, ಕಾರ್ಯದರ್ಶಿ ಅಭಿಷೇಕ್ ಬೆಳ್ತಂಗಡಿ, ಸ್ವಾಗತ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ರೈತ ಸಂಘದ ಮುಖಂಡ ಸುರೇಶ್ ಭಟ್ ಉಪಸ್ಥಿತರಿದ್ದರು.

ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಿ, ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತನ್ನಿ ಎಂಬ ಬೇಡಿಕೆಯೊಂದಿಗೆ ಬೆಳ್ತಂಗಡಿಯಿಂದ ಆರಂಭವಾಗಿರುವ ಯುವಜನ ಜಾಥಾ ಜಿಲ್ಲೆಯಾದ್ಯಂತ ಸಂಚರಿಸಿ ಸೆ.9 ರಂದು ಮಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾರೋಪಗೊಳ್ಳಲಿದೆ ಎಂದು ಡಿವೈಎಫ್ಐ ನ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X