ಬೆಳ್ತಂಗಡಿ | ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತೆಕ್ಕಾರು ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕೊನೆಯ ದಿನವಾದ ಮೇ 3ರಂದು ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಹರೀಶ್ ಪೂಂಜಾ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಉಪ್ಪಿನಂಗಡಿ ನಿವಾಸಿ ಎಸ್.ಎಂ.ಎಸ್.ಇಬ್ರಾಹೀಂ ಮುಸ್ಲಿಯಾರ್ ಎಂಬವರು ನೀಡಿದ ದೂರಿನ‌ ಆಧಾರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರೀಶ್ ಪೂಂಜಾ ಅವರು ದ್ವೇಷ ಭಾಷಣ ಮಾಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ; “ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ. ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದು ಹಾಕಿದ್ದಾರೆ” ಎಂದು ಪೂಂಜಾ ಹೇಳಿದ್ದಾರೆ.

ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಕರಾವಳಿಯಲ್ಲಿ ಉಂಟಾಗಿದ್ದ ಭಯದ ವಾತಾವರಣದ ಕಾರಣದಿಂದಾಗಿ ಜಿಲ್ಲೆಯಲ್ಲಿ 163 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ನಡುವೆಯೂ ಶಾಸಕ ಹರೀಶ್ ಪೂಂಜಾ ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಎಂದು ಎಸ್.ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರಿನಲ್ಲಿ ಆಗ್ರಹಿಸಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...