ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ.
ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್ (39) ಎಂದು ಗುರುತಿಸಲಾಗಿದೆ. ಪತಿ ರಫೀಕ್ ಕೊಲೆ ಆರೋಪಿಯಾಗಿದ್ದಾನೆ. ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಇದನ್ನೂ ಓದಿ: ಉಪ್ಪಿನಂಗಡಿ | ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ
ನಿನ್ನೆ ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ಜಗಳ ತೀವ್ರ ವಿಕೋಪಕ್ಕೆ ತಿರುಗಿದೆ. ಕಾರಣ ಪತ್ನಿಗೆ ರಫೀಕ್ ಚೂರಿಯಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಕೊಂಡಿದ್ದ ಝೀನತ್ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
