ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳು ಧರ್ಮಸ್ಥಳದ ಸೌಜನ್ಯ ಮನೆಯವರೆಗೆ ವಾಹನ ಜಾಥಾ ನಡೆಸಿ ಸೌಜನ್ಯ ಮನೆಗೆ ಭೇಟಿ ಅವರು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸೌಜನ್ಯ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಮಾತನಾಡಿ, ಸೌಜನ್ಯ ಪ್ರಕರಣ ಮುಗಿದ ಅಧ್ಯಾಯವಲ್ಲ. ಆ ಪ್ರಕರಣವನ್ನು ಸರಿಯಾಗಿದ ರೀತಿಯಲ್ಲಿ ತನಿಖೆ ಮಾಡದೇ ಸರ್ಕಾರ ಈ ಪ್ರಕರಣಯನ್ನು ಕೈಬಿಟ್ಟಿದೆ. ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯಾದ್ಯಂತ ಕೂಗು ಕೇಳಿ ಬರುತ್ತಿದೆ. ಈ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮರು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು
ಈ ಸಂಬಂಧ ಉಚ್ಚ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುವುದು. ಸರ್ಕಾರ ಸೂಕ್ತವಾದ ತನಿಖೆಗೆ ಮುಂದಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ಮಾಡಲಾಗುವುದು ಎಂದು ಅವರು ಹೇಳಿದರು.
ಈ ವೇಳೆ ವಿವಿಧ ಸಂಘಟನೆಗಳ ಮುಖಂಡರುಗಳಾದ ನ್ಯಾಯವಾದಿ ಹರಿರಾಂ, ನಟರಾಜ್, ಗುರುಮೂರ್ತಿ, ಕೇಶವ ಮೂರ್ತಿ, ದೇವರಾಜ್, ಚಂದ್ರು, ಜಯಂತಿಗೌಡ, ಚೆನ್ನಕೇಶವ, ಜಾನಕಿ, ಸವಿತ ಹಾಗು ಇತರರು ವಹಿಸಿದ್ದರು. ತಮ್ಮ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.
