ಬೆಳ್ತಂಗಡಿ | ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ: ಎಫ್‌ಐಆರ್ ದಾಖಲು

Date:

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕನೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

- Advertisement -

ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ, ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆಂದು ಬಂದಿದ್ದರು. ಅಲ್ಲಿ ಸುತ್ತಾಡಿದ ಬಳಿಕ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ಪಕ್ಕದಲ್ಲಿ ಕುಳಿತು ಮೊಬೈಲ್‌ನಲ್ಲಿ ಆಟವಾಡುತ್ತಿದ್ದ ಮಕ್ಕಳ ಹೆಸರನ್ನು ಕೇಳಿ ಮುಸ್ಲಿಂ ವಿದ್ಯಾರ್ಥಿಗಳು ಎಂದು ತಿಳಿದು, ಆ ಬಳಿಕ ಮಕ್ಕಳಿಗೆ ಮೇಲೆ ನಿಂದನೆ ಮಾಡಿ ಕೋಣೆಯಲ್ಲಿ ಕೂಡಿ ಹಾಕಿ ಎರಡು ಗಂಟೆಗಳ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಲು ಹೋಗಿದ್ದ ವಿದ್ಯಾರ್ಥಿಗಳ ಪೋಷಕರೊಂದಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಸಹಿತ ಇತರೆ ಸಿಬ್ಬಂದಿಗಳು ವಾಗ್ವಾದ ನಡೆಸಿರುವ ಆರೋಪ ಕೂಡ ಕೇಳಿಬಂದಿದೆ.

WhatsApp Image 2025 12 16 at 1.51.49 PM

ಘಟನೆಯ ವೇಳೆ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಹಲ್ಲೆಯಿಂದ ತಪ್ಪಿಸಿಕೊಂಡು ನಾಪತ್ತೆಯಾಗಿದ್ದನು. ಆ ಬಳಿಕ ರಾತ್ರಿ ಹುಡುಕಾಡಿದಾಗ ಪೋಷಕರ ಕೈಗೆ ಸೇರಿದ್ದಾನೆ. ಸದ್ಯ ಹಲ್ಲೆಯಿಂದ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಎಸ್‌ಡಿಪಿಐ ಪಕ್ಷದ ಮುಖಂಡರಾದ ಅಕ್ಬರ್ ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದು, “ಮಕ್ಕಳ ಧರ್ಮವನ್ನು ಕೇಳಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಇದು ಖಂಡನೀಯ. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

1 52

ಈದಿನ ಜೊತೆಗೆ ಮಾತನಾಡಿರುವ ಹಲ್ಲೆಗೊಳಗಾಗಿರುವ ವಿದ್ಯಾರ್ಥಿಗಳ ಕುಟುಂಬದ ಹೆಸರು ಹೇಳಲಿಚ್ಛಿಸದ ಸದಸ್ಯರೋರ್ವರು, “ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು ಎಷ್ಟು ಸರಿ? ಮಕ್ಕಳನ್ನು ಕೂಡಿ ಹಾಕಿ ಹಲ್ಲೆ ನಡೆಸಲು ಯಾರು ಅಧಿಕಾರ ನೀಡಿದ್ದು? ಘಟನೆ ಸೋಮವಾರ ನಡೆದಿದ್ದರೂ ಮಕ್ಕಳ ಕಲ್ಯಾಣ ಇಲಾಖೆ ಏನು ಮಾಡುತ್ತಿದೆ. ಯಾರೂ ಅವರಿಗೆ ಮಾಹಿತಿ ನೀಡಿಲ್ಲವೇ? ಮಕ್ಕಳ ಕಲ್ಯಾಣ ಇಲಾಖೆಯವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ಧರ್ಮವನ್ನು ಕೇಳಿದ ಬಳಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಾಗಾಗಿ, ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...