ಬೆಳ್ತಂಗಡಿ | ಮುಸ್ಲಿಮರ ಧಾರ್ಮಿಕ ಉಡುಪು ಧರಿಸಿ ಅವಹೇಳನ; ವಿಡಿಯೋ ವೈರಲ್

Date:

Advertisements

ದುಷ್ಕರ್ಮಿಗಳ ಗುಂಪೊಂದು ಮುಸ್ಲಿಮ್ ಸಮುದಾಯದ ಧಾರ್ಮಿಕ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ಧರಿಸಿ ಧಾರ್ಮಿಕ ಅಪಹಾಸ್ಯ ಮಾಡಿರುವ ಪ್ರಚೋದನಾಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ದ.ಕ‌. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಘಟನೆ ನಡೆದಿದ್ದು, ಹಿಂದು ಸಮುದಾಯದ ಕೆಲವು ಮಂದಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಮುಸ್ಲಿಂ ಸಮುದಾಯವನ್ನು ಅಪಹಾಸ್ಯ ಮಾಡುವ ಉದ್ದೇಶದಿಂದಲೇ ಇಂತಹ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ವೇಣೂರಿನ ಪುರುಷರಕಟ್ಟೆ ಎಂಬ ಸ್ಥಳದಲ್ಲಿ ದುಷ್ಕರ್ಮಿಗಳು ಮುಸ್ಲಿಂ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ತೊಟ್ಟು ನಿಂದನಾತ್ಮಕವಾಗಿ ನೃತ್ಯ ಮಾಡಿದ್ದಾರೆ. ಧಾರ್ಮಿಕ ಉಡುಪುಗಳನ್ನು ಅಗೌರವ ಮತ್ತು ಅಪಹಾಸ್ಯ ಮಾಡುವ ರೀತಿಯಲ್ಲಿ ಉಡುಪುಗಳನ್ನು ಧರಿಸಿ, ದಾಂಧಲೆ ನಡೆಸಿದ್ದಾರೆ. ಅಲ್ಲದೇ, ವಿಡಿಯೋದಲ್ಲಿ ಎಸ್‌ಡಿಪಿಐ ಪಕ್ಷದ ಧ್ವಜವೊಂದನ್ನು ಯುವಕನೋರ್ವ ಕೈಯ್ಯಲ್ಲಿ ಹಿಡಿದಿರುವುದು ಕಂಡು ಬಂದಿದೆ.

Advertisements

ಘಟನೆಯ ಬಗ್ಗೆ ಈದಿನ.ಕಾಮ್ಗೆ ಪ್ರತಿಕ್ರಿಯಿಸಿರುವ ವೇಣೂರು ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್, “ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೃತ್ಯ್ಯ ನಡೆದಿದೆ ಎಂಬುದಾಗಿ ದೂರು ಬಂದಿದೆ. ಆದರೆ, ಪ್ರತಿ ವರ್ಷವೂ ಪುರುಷಕಟ್ಟೆ ಪೂಜೆಯ ವೇಳೆ ನಾನಾ ರೀತಿಯ ವೇಷ ಧರಿಸಿ ನೃತ್ಯ ಮಾಡಲಾಗುತ್ತದೆ. ಈ ಬಾರಿ ಬುರ್ಖಾವನ್ನೂ ಹಾಕಲಾಗಿದೆ. ದೂರು ದಾಖಲಿಸಿಕೊಂಡಿದ್ದು, ಎಡಿಸಿ ಅಭಿಪ್ರಾಯಕ್ಕಾಗಿ ಪತ್ರ ಬರೆದಿದ್ದೇವೆ. ಎಡಿಸಿಯಿಂದ ಪ್ರತಿಕ್ರಿಯೆ ಬಂದ ಬಳಿಕ, ಅದರ ಅನುಸಾರ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X