ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ, ಕಳೆಂಜ ಗ್ರಾಮದ ನಿವಾಸಿ ರಾಜೇಶ್.ಎಮ್.ಕೆ. ಆರೋಪಿ (33) ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಜೂ.5ರಂದು ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ
ಮತ್ತೊಂದೆಡೆ ಜೂ.4ರಂದು ರಾತ್ರಿ ಬಿಜೆಪಿ ಮುಖಂಡ ರಾಜೇಶ್‌ನ ಕೊಲೆ ಯತ್ನ ನಡೆಸಿದ ಆರೋಪ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಿನ್ನ ದರೋಡೆ ಮಾಡಿದ ಪ್ರಕರಣವು ದಾಖಲಾಗಿದೆ.
ಆರೋಪಿ ಕುಶಲಪ್ಪ ಗೌಡನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.