ಬೆಳ್ತಂಗಡಿ | 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಿದ ಸರಳಿಕಟ್ಟೆ ಗೈಸ್

Date:

Advertisements

ಸರಳಿಕಟ್ಟೆಯ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಳಿಕಟ್ಟೆ ಜುಮ್ಮಾ ಮಸೀದಿಯ ಖತೀಬ್ ಬಹು ಅಬ್ದುರ್‌ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

Advertisements

ಸರಳಿಕಟ್ಟೆ ಊರಿನ ಉದ್ಯಮಿಗಳು, ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತ ಮುನ್ನಡೆಸಿಕೊಂಡು ಬಂದಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯ ವಿವಾಹ ನಿರ್ಮೂಲನೆ ಸಾಧ್ಯ : ನ್ಯಾ. ಸೋಮಶೇಖರ್ ಅಭಿಮತ

ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ಹೋಗಿ 175 ಕುಟುಂಬಗಳ ಮನೆಗಳಿಗೆ ರಂಝಾನ್‌ ಕಿಟ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಎಂ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ ಎಸ್. ಹೈದರ್ ಗುಂಪಕಲ್ಲು ಮತ್ತು ಜಮಾಅತ್‌ನ ಸದಸ್ಯರಾದ ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X