ಬೆಳ್ತಂಗಡಿ | ಅನ್ಯಾಯಕ್ಕೆ ಒಳಗಾದವರಿಗೆ ಎಸ್‌ಡಿಪಿಐ ನ್ಯಾಯ ಕೊಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

Date:

ಧರ್ಮಸ್ಥಳ ಗ್ರಾಮದ ಪಾಂಗಳ ರಸ್ತೆಯ ಸಮೀಪ ಯೂಟ್ಯೂಬರ್‌ಗಳ ಮೇಲೆ ನಡೆದ ಅಮಾನವೀಯ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ  ನಡೆಯಿತು.

- Advertisement -

 ಪ್ರತಿಭಟನೆಯನ್ನು ಉದ್ದೇಶಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ,  ಧರ್ಮಸ್ಥಳದಲ್ಲಿ ಯುಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪೂರ್ವಯೋಜಿತ ಮತ್ತು ಸಾಕ್ಷಿ ದೂರು ಪ್ರಕರಣ ದಿಕ್ಕು ತಪ್ಪಿಸಲು ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಒಂದು ಭಾಗ. ಅನ್ಯಾಯ ಕಂಡಲ್ಲಿ ಅದನ್ನು ಪ್ರಶ್ನೆ ಮಾಡುವುದು ನಮ್ಮ ಪಕ್ಷದ ಮೂಲ ಸಿದ್ಧಾಂತವಾಗಿದೆ. ಪ್ರಶ್ನೆ ಮಾಡುವುದನ್ನು ಮಾಡಿಯೇ ತೀರುತ್ತೇವೆ ಎಂದರು. ಅದು ಎಷ್ಟೇ ಬಲಾಡ್ಯರಾದರೂ ಸರಿ, ಹತ್ಯೆಗಳ ಬಗ್ಗೆ ಮೌನಕ್ಕೆ ಜಾರಿದ್ದ ಬಿಜೆಪಿ ಮುಖಂಡರು ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ನಮ್ಮ ಹೋರಾಟವನ್ನು ಅಣಕಿಸಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

ಬೆಳ್ತಂಗಡಿ ವಿಧಾನಸಭಾ ಸದಸ್ಯ ಸಲೀಂ ಗುರುವಾಯನಕೆರೆ ಮಾತನಾಡಿ, ಜನರಿಗೆ ಸತ್ಯವನ್ನು ತೋರಿಸುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಖಂಡನೀಯ. ಬಿಜೆಪಿ ಈ ಪ್ರಕರಣವನ್ನು ಹಿಂದೂ-ಮುಸ್ಲಿಂ ಮಾಡುವುದರಲ್ಲಿ ತಲ್ಲೀನವಾಗಿದೆ ಎಂದರು. ಕಾಂಗ್ರೆಸ್ ಬಿಜೆಪಿಯೊಂದಿಗೆ ಎಜಸ್ಟ್ಮೆಂಟ್ ರಾಜಕೀಯದಲ್ಲಿ ತೊಡಗಿದೆ. ಆದ್ರೆ ಎಸ್‌ಡಿಪಿಐ ಯಾವುದೇ ಭಯವಿಲ್ಲದೆ ನೇರವಾಗಿ ಹೋರಾಟದಲ್ಲಿದೆ ಎಂದು ಹೇಳಿದರು. ಅದೇ ರೀತಿ ಎಸ್‌ಡಿಪಿಐಯು ತಿಮರೋಡಿ ಅಥವಾ ಮಟ್ಟಣ್ಣನವರ ಪರವಾಗಿಲ್ಲ ಬದಲಾಗಿ ಸೌಜನ್ಯಳ ಪರವಾಗಿದೆ. ಯಾವುದೇ ಧರ್ಮದವನಿಗೂ ಅನ್ಯಾಯವಾದರು ನ್ಯಾಯ ಮರೀಚಿಕೆಯಾಗುವ ಹಂತದಲ್ಲಿದ್ದರೆ ಎಸ್‌ಡಿಪಿಐ ಹೋರಾಟದ ಮುಂಚೂಣಿಯಲ್ಲಿರುತ್ತದೆ ತಿಳಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ವಿಧಾನಸಭಾ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಪ್ರಧಾನ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ರವೂಫ್ ಪುಂಜಾಲಕಟ್ಟೆ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...