ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು ‘ವಿಶ್ವ ಪಾರಂಪರಿಕ ತಾಣ’ ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಸೌದಿ ಅರೆಬಿಯಾದ ರಿಯಾದ್‌ನಲ್ಲಿ ನಡೆದ ಯೂನೆಸ್ಕೋ ಸರ್ವ ಸದಸ್ಯರ ಸಭೆಯಲ್ಲಿ ಈ ಮೂರು ತಾಣಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, “ರಾಜ್ಯ ಸರ್ಕಾರದ ಸತತ ಪರಿಶ್ರಮದ ಫಲವಾಗಿ ರಾಜ್ಯದ ಮೂರು ದೇವಾಲಯಗಳ ಕಲೆ ಮತ್ತು ಪರಂಪರೆಯನ್ನು ಯುನೆಸ್ಕೋ ಗುರುತಿಸಿದೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದೆ” ಎಂದಿದ್ದಾರೆ.
ಜಾಗತಿಕ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವುದರಿಂದ ಈ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಸ್ಥಳೀಯ ಕರಕುಶಲ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆ ದೊರೆಯಲಿದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ” ಎಂದು ಹೇಳಿದ್ದಾರೆ.