ಬೆಂಗಳೂರು | ಕನ್ನಡ ರಾಜ್ಯೋತ್ಸವದಲ್ಲಿ 1700 ಶಾಲಾ ಮಕ್ಕಳು ಭಾಗಿ: ಸಚಿವ ಮಧು ಬಂಗಾರಪ್ಪ

Date:

ಈ ಬಾರಿಯ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1700 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -

ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಿರಲಿದೆ. ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು. ಈ ಬಾರಿ 1700 ಮಕ್ಕಳು ಭಾಗವಹಿಸಲಿದ್ದಾರೆ. ಅವರಲ್ಲಿ 700 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು. ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಉಪಸ್ಥಿತರಿರಲಿದ್ದಾರೆ.

“ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಶಿಕ್ಷಕರು ರೆಮಿಡಿಯಲ್ ತರಗತಿಗಳನ್ನು ಸುಲಭವಾಗಿ ನಡೆಸುತ್ತಿದ್ದಾರೆ. ಮಕ್ಕಳ ದಿನಾಚರಣೆಯ ಅಂಗವಾಗಿ ನವೆಂಬರ್ 14 ರಂದು ಮಕ್ಕಳು, ಪೋಷಕರು, ಶಿಕ್ಷಕರನ್ನು ಒಗ್ಗೂಡಿಸಿ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅಲ್ಲದೆ, ಶಾಲೆಗಳ ಪ್ರವೇಶ ಪ್ರಚಾರ (Admission Drive)ಕ್ಕೆ ಚಾಲನೆ ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕಗಳು 35ರಿಂದ 33ಕ್ಕೆ ನಿಗದಿ ಪಡಿಸಿರುವುದು ನನ್ನ ವೈಯಕ್ತಿಕ ನಿರ್ಧಾರವಲ್ಲ. ಜನಾಭಿಪ್ರಾಯ ಪಡೆದು ಮಾಡಲಾಗಿದೆ. ಇದು ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ” ಎಂದರು.

ಇದನ್ನೂ ಓದಿ: ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ

“ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟಾರೆಯಾಗಿ ಸುಮಾರು 32 ರಿಂದ 33 ಸಾವಿರ (ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಒಳಗೊಂಡಂತೆ) ಶಿಕ್ಷಕರನ್ನು (ಶಾಲಾ ಶಿಕ್ಷಣ, ಪಿಯುಸಿ, ಅನುದಾನಿತ ಶಾಲೆಗಳು ಸೇರಿದಂತೆ) ನೇಮಕ ಮಾಡಲಾಗುವುದು” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ವಿಕಾಶ್ ಕಿಶೋರ್ ಸೂರಳ್ಕರ್, ಪಿಯುಸಿ ನಿರ್ದೇಶಕ ಭರತ್ ಎಸ್, ಶಾಲಾ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಡಾ. ಕೆ ವಿದ್ಯಾಕುಮಾರಿ, ಬಸವರಾಜೇಂದ್ರ, ಹೆಚ್ ಎನ್ ಗೋಪಾಲಕೃಷ್ಣ ಮತ್ತು ಕೃಷ್ಣಾಜಿ ಎಸ್. ಕರಿಚಣ್ಣವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...