ಬೆಂಗಳೂರು | ಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟರೂ ಕೆಲಸ ಆಗಿಲ್ಲ: ಪೋಸ್ಟ್ ವೈರಲ್ 

Date:

ʼಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟು, ಮೂರು ತಿಂಗಳಿನಿಂದ ಅಲೆದಾಡಿದರೂ ಕೆಲಸ ಮಾತ್ರ ಆಗಿಲ್ಲʼ ಎನ್ನುವ ಬೆಂಗಳೂರಿನ ವ್ಯಕ್ತಿಯೊಬ್ಬರ ಎಕ್ಸ್‌ ಪೋಸ್ಟ್‌ ಒಂದು ನೆಟ್ಟಿಗರ ಗಮನ ಸೆಳೆಯುತ್ತಿದೆ.

- Advertisement -

ಬೆಂಗಳೂರಿನ ನೆಟ್ಟಿಗ ಮಾಧವ ಎಂಬುವರು ಎಕ್ಸ್​ನಲ್ಲಿ, ʼನನ್ನ ತಂದೆ 14 ಸೆಂಟ್ಸ್​ ಆಸ್ತಿ ನೋಂದಣಿಗಾಗಿ ತಹಶೀಲ್ದಾರ್​ಗೆ 3 ಲಕ್ಷ ಮತ್ತು ಕಂಪ್ಯೂಟರ್ ಆಪರೇಟರ್​ಗೆ 10 ಸಾವಿರ ರೂ. ಲಂಚ ನೀಡಿದ್ದಾರೆ. 3 ತಿಂಗಳು ಕಳೆದರೂ ಕೂಡ ನೋಂದಣಿಯಾದ ದಾಖಲೆ ಪತ್ರ ಇನ್ನೂ ನಮ್ಮ ಕೈ ಸೇರಿಲ್ಲʼ ಎಂದು ಬರೆದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್​ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರೂ ಆಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿವೆ. ಇನ್ನು, ಸಾಮಾಜಿಕ ಮಾಧ್ಯಮವಾದ ಎಕ್ಸ್​ನಲ್ಲಿ ನೆಟ್ಟಿಗರು ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಅಕ್ಷರಶಃ ಸ್ಯತ್ಯ ಎನ್ನುತ್ತಿದ್ದಾರೆ.

ಈ ಪೋಸ್ಟ್​ಗೆ asdf ಎಂಬ ಹೆಸರಿನ ಖಾತೆದಾರರು, ಉತ್ತರ ಬೆಂಗಳೂರಿನಲ್ಲಿ 1500 ಚದರ ಅಡಿ ಭೂಮಿ ನೋಂದಣಿಗೆ ಸಬ್ ರಿಜಿಸ್ಟ್ರಾರ್‌ಗೆ 35000 ರೂ, ಆರ್‌ಟಿಸಿ ದಾಖಲೆಗಳಲ್ಲಿ ಹೆಸರು ಬದಲಾವಣೆ ಮಾಡಲು ತಹಶೀಲ್ದಾರ್‌ಗೆ 25000 ರೂ. ಮತ್ತು ಸರ್ವೇ ಅಧಿಕಾರಿಗಳಿಗೆ ಸರ್ವೆ ಮತ್ತು ಗಡಿ ಗುರುತಿಸಲು 8000 ರೂ. (ಅಧಿಕೃತ ಶುಲ್ಕಗಳು ಸೇರಿದಂತೆ) ನೀಡಿದ್ದೇನೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ಬಿಜೆಪಿ ಅಧಿಕಾರದಲ್ಲಿದ್ದಾಗ ಕಮಿಷನ್‌ ಸರ್ಕಾರ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು, ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್‌ನ್ನು ಲೂಟಿಕೋರ ಸರ್ಕಾರ ಎಂದು ಬಿಜೆಪಿ ಜರೆಯುತ್ತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಮಾಡಬೇಕಾದ ಜನಪರ ಕೆಲಸಗಳನ್ನು ಮೂಲೆಗುಂಪು ಮಾಡಿ ಆಡಳಿತ-ವಿರೋಧ ಪರಸ್ಪರ ಕಚ್ಚಾಡುತ್ತವೆಯಷ್ಟೆ. ಜನಪ್ರತಿನಿಧಿಗಳ ಪರಸ್ಪರ ಕೆಸರೆರಚಾಟದ ಪರಿಣಾಮ ಜನತಾ ಜನಾರ್ಧನನ ಸ್ಥಿತಿ ಹೇಳತೀರದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...