ಬೆಂಗಳೂರು : ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

Date:

Advertisements

ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು  ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು  ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವ ದುಃಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ನೂತನವಾಗಿ ನೇಮಕಗೊಂಡಿರುವ ಆಮ್ ಆದ್ಮಿ ಪಕ್ಷದ ನೂತನ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರದಿಂದ ಮುದ್ರಾಂಕ ಶುಲ್ಕ ಆಸ್ತಿ,  ದರ ಹೆಚ್ಚಳ, ವಾಹನಗಳ ರಿಜಿಸ್ಟ್ರೇಷನ್ ಶುಲ್ಕ, ನಂದಿನಿ ಹಾಲಿನ ಬೆಲೆ, ದೇಶಿಯ ಮದ್ಯದ ದರ ಹೆಚ್ಚಳ ,ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಎಲೆಕ್ಟ್ರಿಕ್ ವಾಹನಗಳ ಮೇಲೆ ಇದ್ದ ತೆರಿಗೆ ವಿನಾಯಿತಿ ರದ್ದು ,ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಶುಲ್ಕ ದುಬಾರಿ, ಕುಡಿಯುವ ನೀರಿನ ಬೆಲೆ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ದುಬಾರಿ ಆಸ್ತಿಗಳ ಬಿ ಖಾತೆ ಹೆಸರಿನಲ್ಲಿ ತೆರಿಗೆ ದರೋಡೆ, ಕೆಪಿಟಿಸಿಎಲ್ ಎಸ್ಕಾಂ ನೌಕರರ ಪಿಂಚಣಿ ಅವರೇ ನೇರವಾಗಿ ರಾಜ್ಯದ ನಾಗರಿಕರಗಳ ಮೇಲೆ ಹೊರೆ ,ಬಿಬಿಎಂಪಿ ವ್ಯಾಪ್ತಿಯಲ್ಲಿ ದುಪ್ಪಟ್ಟು ಆಸ್ತಿ ತೆರಿಗೆ, ಕೆಪಿಟಿಸಿಎಲ್ ನೂತನ ಮೀಟರ್ ಗಳ ಬೆಲೆ ಲಕ್ಷಾಂತರ ಏರಿಕೆ ,ರೈತರ ಪಂಪ್ಸೆಟ್ಗಳ ಮೇಲೆ ದುಬಾರಿ ವೆಚ್ಚ, ವಿದ್ಯುತ್ ದರ ಏರಿಕೆ ಹಾಗೂ ಮೆಟ್ರೋ ಬೆಲೆ 100 ಪರ್ಸೆಂಟ್  ಏರಿಕೆಯನ್ನು ಮಾಡಿದೆ ಎಂದು ಕಿಡಿಕಾರಿದರು.

aap2 1

ಇದೇ ರೀತಿ ಬಿಜೆಪಿಯ ಕೇಂದ್ರ ಸರ್ಕಾರವು ಸಹ  ಟೋಲ್, ಔಷಧ, ಕಾರು ,ವಿದೇಶಿ ಶಿಕ್ಷಣ, ವೀಸಾ ಶುಲ್ಕ, ಸಿ ಏನ್ ಜಿ ಮೇಲಿನ ತೆರಿಗೆ ಹೆಚ್ಚಳದಿಂದಾಗಿ ಜನಸಾಮಾನ್ಯನು ಬದುಕಲು ತತ್ತರಿಸುವಂತಹ ಪರಿಸ್ಥಿತಿಗೆ  ಕಳ್ಳಿದ್ದಾರೆ. ಇವುಗಳ ವಿರುದ್ಧ ರಾಜ್ಯದಾದ್ಯಂತ ಮನೆಮನೆಗಳಲ್ಲಿ ಪಕ್ಷದ ವತಿಯಿಂದ ಕಾರ್ಯಕರ್ತರುಗಳು ಬೃಹತ್ ಜಾಗೃತಿ ಅಭಿಯಾನವನ್ನು ಇದೇ ತಿಂಗಳ 5ನೇ  ತಾರೀಖಿನಿಂದ ಬೆಂಗಳೂರಿನಿಂದ ಆರಂಭಿಸಲಾಗುವುದು ಎಂದು ಸೀತಾರಾಮ ಗುಂಡಪ್ಪ ತಿಳಿಸಿದರು.

Advertisements
aap1

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ . ಸದಂ, ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಕುಮಾರ್, ಹರಿಹರನ್, ಶಶಿಧರ್ ಆರಾಧ್ಯ  ,ಅನಿಲ್ ನಾಚಪ್ಪ, ಅಯೂಬ್ ಖಾನ್ , ಇರ್ಷಾದ್ ಖಾನ್  ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X