ಬೆಂಗಳೂರು | ಕಳೆದ ದೀಪಾವಳಿಗಿಂತ ಈ ಬಾರಿ ವಾಯು ಗುಣಮಟ್ಟ ಶೇ.98ರಷ್ಟು ಉತ್ತಮ: ಕೆಎಸ್‌ಪಿಸಿಬಿ

Date:

ದೀಪಾವಳಿಯ ಎರಡನೇ ದಿನದಲ್ಲಿ ಬೆಂಗಳೂರು ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಕಳೆದ ದೀಪಾವಳಿಗಿಂತ ಶೇ.98ರಷ್ಟು ಉತ್ತಮವಾಗಿದ್ದು, ಸಾಮಾನ್ಯ ದಿನಕ್ಕಿಂತ ಶೇ.7ರಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶಬ್ದ ಮಾಲಿನ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ತಿಳಿಸಿದೆ.

- Advertisement -

ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆಯಲ್ಲಿರುವ ಮೇಲ್ವಿಚಾರಣಾ ಕೇಂದ್ರಗಳು ಕ್ರಮವಾಗಿ 104 ಮತ್ತು 109 ವಾಯು ಗುಣಮಟ್ಟ ಸೂಚ್ಯಂಕವನ್ನು ವರದಿ ಮಾಡಿದ್ದವು. ಕಳೆದ ವರ್ಷ ದೀಪಾವಳಿಯ ಮೊದಲ ದಿನದಂದು ಹೆಬ್ಬಾಳದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 263, ಹೊಂಬೇಗೌಡ ನಗರ 121, ಸಿಲ್ಕ್ ಬೋರ್ಡ್ ಜಂಕ್ಷನ್ 170, ಮೈಸೂರು ರಸ್ತೆ 122 ಮತ್ತು ಜಯನಗರ 136ಕ್ಕೆ ತಲುಪಿತ್ತು ಎಂದು ಮಾಹಿತಿ ಹೊರಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೀಪಾವಳಿ ಪೂರ್ವದ ವಾಯು ಗುಣಮಟ್ಟಕ್ಕೆ ಹೋಲಿಸಿದರೆ ಪೀಣ್ಯದಲ್ಲಿ ವಾಯು ಮಾಲಿನ್ಯವು ಶೇ.52ರಷ್ಟು ಹೆಚ್ಚಾಗಿದೆ. ಆದರೆ ಹೊಸಕೋಟೆ ಮತ್ತು ದಾಸರಹಳ್ಳಿಯಲ್ಲಿಯೂ ಹೆಚ್ಚಿನ ವಾಚನ ದಾಖಲಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ, ಮೈಸೂರು ರಸ್ತೆ, ಹೊಂಬೇಗೌಡ ನಗರ, ಜಯನಗರ, ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿರುವ ನಿಲ್ದಾಣಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಸುಧಾರಣೆ ಕಂಡುಬಂದಿದೆ.

“ಅನೇಕ ನಿವಾಸಿಗಳು ತಮ್ಮ ಊರುಗಳಲ್ಲಿ ದೀಪಾವಳಿ ಆಚರಿಸಲು ಬೆಂಗಳೂರಿನಿಂದ ಹೊರಗೆ ಪ್ರಯಾಣ ಬೆಳೆಸಿದ್ದರಿಂದ, ಸಂಚಾರ ದಟ್ಟಣೆ ಕಡಿಮೆಯಾಗಿ ಗಾಳಿಯ ಗುಣಮಟ್ಟ ಸುಧಾರಿಸಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

ಮಂಗಳವಾರ ರಾತ್ರಿ ಮತ್ತು ಬುಧವಾರವೂ ಜನರು ಪಟಾಕಿ ಸಿಡಿಸುವುದನ್ನು ಮುಂದುವರೆಸಿದ್ದರಿಂದ ವಾಯುಮಾಲಿನ್ಯದ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಕೆಎಸ್‌ಪಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100ಕ್ಕಿಂತ ಹೆಚ್ಚಿನ AQI ಮಟ್ಟಗಳು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಶ್ವಾಸಕೋಶ ಅಥವಾ ಹೃದಯ ಕಾಯಿಲೆ ಇರುವ ವ್ಯಕ್ತಿಗಳಲ್ಲಿ, ಮಕ್ಕಳು ಮತ್ತು ವೃದ್ಧರಲ್ಲಿ ಉಸಿರಾಟದ ತೊಂದರೆಯನ್ನು ಉಂಟುಮಾಡಬಹುದೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...