ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ

Date:

ಬೆಂಗಳೂರು ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್‌ನನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳೊಂದಿಗೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಭೇಟಿ ನೀಡಿದರು.

- Advertisement -

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೂಡಲೇ ಈ ದುರ್ಘಟನೆಗೆ ಕಾರಣವಾಗಿರುವ ಬಿಬಿಎಂಪಿಯ ಅರಣ್ಯ ವಿಭಾಗದ ಉನ್ನತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಪಕ್ಷದ ಬೆಂಗಳೂರಿನ ಕಾರ್ಯಕರ್ತರುಗಳು ಅನೇಕ ಬಾರಿ ಹಳೆಯ ಮರಗಳು ಹಾಗೂ ಕೊಂಬೆಗಳನ್ನು ತೆಗೆಯಲು ಅನೇಕ ವರ್ಷಗಳಿಂದ ದೂರನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಬಿಬಿಎಂಪಿಯ ಅರಣ್ಯ ವಲಯದ ಅಧಿಕಾರಿಗಳು ಮುಂದಾಗುತ್ತಿಲ್ಲ. ಇವರುಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಅಕ್ಷಯ್‌ನಂತಹ ನೂರಾರು ಬೆಂಗಳೂರಿನ ನಾಗರಿಕರುಗಳ ಪ್ರಾಣಕ್ಕೆ ಸಂಚಕಾರ ಬಂದಿದೆ. ಅಧಿಕಾರಿಗಳು ಇಂತಹ ಅನೇಕ ದುರ್ಘಟನೆಗಳು ಪದೇಪದೇ ಸಂಭವಿಸಿದ್ದರೂ ಸಹ ಎಚ್ಚೆತ್ತುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ.

ಇದನ್ನು ಓದಿದ್ದೀರಾ? ಕಾಲ್ತುಳಿತದ ಹಿಂದೆ ಬಿಜೆಪಿ ಷಡ್ಯಂತ್ರ: ನ್ಯಾ.ಜಾನ್ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಂಗ್ರೆಸ್‌ ನಿಯೋಗದಿಂದ ದೂರು

ಸರ್ಕಾರವು ಅಧಿಕಾರಿಗಳ ಉತ್ತರದಾಯಿತ್ವವನ್ನು ನಿಜಕ್ಕೂ ಪ್ರಶ್ನಿಸುವ ತಾಕತ್ತನ್ನು ಹೊಂದಿದ್ದಲ್ಲಿ ಕೂಡಲೇ ಈ ವಿಭಾಗದ ಉನ್ನತ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಪಕ್ಷದ ಮುಖಂಡರುಗಳಾದ ಸರವಣ, ಇರ್ತಾದ್, ವೀಣಾ ಸರಾವ್, ಮಣಿಕಂಠ ಸೇರಿದಂತೆ ಅನೇಕ ಮುಖಂಡರುಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....