ಬೆಂಗಳೂರು | ಕ್ರಿಸ್ತ ನಮನ ಕನ್ನಡದಲ್ಲಿಯೇ ಪ್ರಸಾರ ಮಾಡಿ: ಕರ್ನಾಟಕ ಕೆಥೋಲಿಕ್ ಕ್ರೆಸ್ತರ ಕನ್ನಡ ಸಂಘ ಆಗ್ರಹ

Date:

ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ‘ಕ್ರಿಸ್ತ ನಮನ’ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೆಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದ್ದಾರೆ.

- Advertisement -

ದೂರದರ್ಶನ ಚಂದನ ವಾಹಿನಿಯು ಕ್ರಿಸ್ಮಸ್ ಹಿನ್ನೆಲೆಯಲ್ಲಿ ಕ್ರಿಸ್ತ ನಮನ’ ಕಾರ್ಯಕ್ರಮವನ್ನು ಪ್ರತಿ ವರ್ಷ ಪ್ರಸಾರ ಮಾಡುತ್ತಾ ಬಂದಿರುವುದು ಸ್ವಾಗತಾರ್ಹ. ಇಷ್ಟು ವರ್ಷ ಕನ್ನಡದಲ್ಲಿ ಮಾತ್ರ ಪ್ರಸಾರ ಮಾಡುತ್ತಿದ್ದಕ್ರಿಸ್ತ ನಮನ’ ಕಾರ್ಯಕ್ರಮವು, ಇದೀಗ ಈ ವರ್ಷ ತಮಿಳು, ಇಂಗ್ಲಿಷ್ ಭಾಷೆಯೂ ಸೇರಿಕೊಂಡಿರುವುದಾಗಿ ತಿಳಿದುಬಂದಿದೆ ಎಂದು ಬೆಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕೆಜಿಎಫ್‌ನಲ್ಲಿ ತಮಿಳು ಪಾದ್ರಿಗಳ ಮಾರ್ಗದರ್ಶನದಲ್ಲಿ ಚಿತ್ರೀಕರಣ ನಡೆದಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಅದು ನಿಜವೇ ಆಗಿದ್ದಲ್ಲಿ, ಕನ್ನಡದ ಮೇಲೆ ನಡೆಯುವ ನೇರ ಪ್ರಹಾರವಾಗಿದೆ. ಚಂದನ ವಾಹಿನಿ ಈ ತಮಿಳು, ಇಂಗ್ಲಿಷ್ ಕಾರ್ಯಕ್ರಮವನ್ನು ಪ್ರಸಾರ ಮಾಡಬಾರದು. ಕನ್ನಡಿಗರ ಭಾವನೆಯನ್ನು ಗೌರವಿಸದೆ ಕನ್ನಡ ವಿರೋಧಿ ಆರ್ಚ್ ಬಿಷಪ್ ಪಿಟರ್ ಮಚಾದೋ ಅವರ ಒತ್ತಡಕ್ಕೆ ಮಣಿದು ಕಾರ್ಯಕ್ರಮವನ್ನು ಪ್ರಸಾರ ಮಾಡಿದರೆ, ಆಗುವ ಅನಾಹುತಕ್ಕೆ ವಾಹಿನಿಯ ನಿರ್ದೇಶಕರೆ ಜವಾಬ್ದಾರಿಯಾಗುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

ಕನ್ನಡ, ತಮಿಳು ಮತ್ತು ಆಂಗ್ಲ ಭಾಷೆಯ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಹೊರಟಿರುವ ಕನ್ನಡಕ್ಕೇ ಮೀಸಲಾದ ಚಂದನ ವಾಹಿನಿಯ ಕನ್ನಡ ವಿರೋಧಿ ಧೋರಣೆಯ ವಿರುದ್ಧ ಅಖಿಲ ಕರ್ನಾಟಕ ಕೆಥೋಲಿಕ್ ಕ್ರೆಸ್ತರ ಕನ್ನಡ ಸಂಘ ಧ್ವನಿ ಎತ್ತುತ್ತದೆ ಎಂದು ಎ.ಐಸಾಕ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಸೋಲಿಡಾರಿಟಿ ಪ್ರಕಟಿಸಿರುವ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ

ಸುದ್ದಿಗೋಷ್ಠಿಯಲ್ಲಿ ಕನ್ನಡ ಸಂಘದ ಕಾರ್ಯದರ್ಶಿ ಬರ್ತಲೋಮಿಯೋ ಪಿ, ಖಜಾಂಚಿ ಜಾರ್ಜ್ ಕುಮಾರ್ ವೈ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...