ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚಿ ʼಗುಂಡಿ ಮುಕ್ತ ರಸ್ತೆʼಗಳೆಂದು ಘೋಷಿಸಿ: ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

Date:

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿ ʼಗುಂಡಿ ಮುಕ್ತ ರಸ್ತೆʼಗಳೆಂದು ಘೋಷಿಸುವಂತೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಚಿಕ್ಕಪೇಟೆ ವಿಭಾಗದ ವ್ಯಾಪ್ತಿಯಲ್ಲಿನ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸುಮಾರು 25 ಕಿ.ಮೀ ವ್ಯಾಪ್ತಿ ದ್ವಿಚಕ್ರ(ಬೈಕ್) ವಾಹನದ ಮೂಲಕ ಸಂಚರಿಸಿ ರಸ್ತೆ ಗುಂಡಿಗಳು, ಕೈಗೊಂಡ ರಸ್ತೆ ದುರಸ್ತಿ ಕಾಮಗಾರಿ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....
ಚಿಕ್ಕಪೇಟೆ ರಸ್ತೆ

ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆ ನೀಡಿದ್ದು, “ತುರ್ತಾಗಿ ಎಲ್ಲ ರಸ್ತೆ ಗುಂಡಿಗಳನ್ನು ಉತ್ತಮ ರೀತಿಯಲ್ಲಿ ಮುಚ್ಚಬೇಕು. ಜಂಕ್ಷನ್‌ಗಳ ಅಭಿವೃದ್ಧಿ, ವೃತ್ತಗಳ ಅಭಿವೃದ್ಧಿ ಮಾಡಬೇಕು. ಹೊಸೂರು ರಸ್ತೆ ಮೇಲ್ಮೈ ಡಾಂಬರೀಕರಣ(resurfacing)ವಾಗಬೇಕು. ರಸ್ತೆ ಬದಿ ತ್ಯಾಜ್ಯ ಬ್ಲಾಕ್ ಸ್ಪಾಟ್‌ಗಳ ತೆರವು ಹಾಗೂ ಬ್ಲಾಕ್ ಸ್ಪಾಟ್‌ಗಳಾಗದಂತೆ ತಡೆಯಬೇಕು. ಪಾದಚಾರಿ ಮಾರ್ಗಗಳನ್ನು ದುರಸ್ತಿಗೊಳಿಸಿ ಪಾದಚಾರಿಗಳ ಸಂಚಾರ ಸುಗಮಗೊಳಿಸಬೇಕು. ಜೆಸಿ ರಸ್ತೆಯಲ್ಲಿನ ನಗರ ಪಾಲಿಕೆ ಜಾಗದ ಸುತ್ತಲೂ ಕಾಂಪೌಂಡ್/ತಂತಿಬೇಲಿ ಹಾಕಬೇಕು. ಜತೆಗೆ ಸದರಿ ಜಾಗದ ಅಭಿವೃದ್ಧಿಗೆ ಡಿಪಿಆರ್ ತಯಾರಿಸಬೇಕು ಎಂದು ತಿಳಿಸಿದರು.‌

ಆಯುಕ್ತ ರಾಜೇಂದ್ರ ಚೋಳನ್‌ 1

ಸ್ಥಳ ಪರಿಶೀಲನೆ ನಡೆಸಿದ(ಸಂಚರಿಸಿದ) ರಸ್ತೆಗಳು

ಬುಲ್‌ ಟೆಂಪಲ್‌ ರೋಡ್‌, ವಾಣಿವಿಲಾಸ್‌ ರೋಡ್‌, ಶಂಕರ್‌ ಮಠ್‌ ರೋಡ್, ‌ಕೆ ಆರ್‌ ರಸ್ತೆ, ನ್ಯಾಷನಲ್‌ ಕಾಲೇಜ್‌ ಲೆಫ್ಟ್‌ ವಾಣಿವಿಲಾಸ್‌ ರಸೆ, ವೆಸ್ಟ್‌ ಗೇಟ್‌, ಆರ್‌ವಿ ರಸ್ತೆ, ಟೀಚರ್ಸ್‌ ಕಾಲೇಜ್‌ ಲೆಫ್ಟ್‌, ಕನಕನಪಾಳ್ಯ ರಸ್ತೆ, ಟಿ ಮರಿಗೌಡ ರಸ್ತೆ, ಹೊಸೂರು ರಸ್ತೆ, ಕೃಂಬಿಗಲ್‌ ರಸ್ತೆ ವೆಸ್ಟ್‌ ಗೇಟ್‌ ರೈಟ್‌, ಜೆಸಿ ರಸ್ತೆ, ಪೂರ್ಣಿಮಾ ಟಾಕೀಸ್‌ ರಸ್ತೆ, ಲಾಲ್‌ಬಾಗ್‌ ರಸ್ತೆಗಳಲ್ಲಿ ಸಂಚರಿಸಿದ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು.

ಈ ಸುದ್ದೆಇ ಓದಿದ್ದೀರಾ? ಭೀಮಾ ನದಿ ಅಬ್ಬರ | ಪ್ರವಾಹಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ; 6,664 ಜನ ಸಂತ್ರಸ್ತರ ರಕ್ಷಣೆ

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಮುಖ್ಯ ಅಭಿಯಂತ ವಿಜಯಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಎಇಇ, ಎಇ, ಜೆಇ ಅಧಿಕಾರಿಗಳು, ಮಾರ್ಷಲ್‌ಗಳು ಸೇರಿದಂತೆ ಸಂಬಂಧಪಟ್ಟವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...