ಸಚಿವ ಝಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ನೀಡಿದರು.
ವಿಲ್ಸನ್ ಗಾರ್ಡನ್ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗಳು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ ನೀಡದರು. ಗಾಯಾಳುಗಳಾದ ತಾಯಿ-ಮಗಳ ಕುಟುಂಬಕ್ಕೆ ಎರಡು ಲಕ್ಷ ರೂ., ಇಬ್ಬರು ಗಾಯಾಳು ಕುಟುಂಬಕ್ಕೆ ಎರಡು ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ. ನೀಡಿದರು. ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಎಸಿ ಕೋರ್ಟ್‌ಗಳಲ್ಲಿ ನ್ಯಾಯಬದ್ಧ ಪ್ರಕರಣಗಳನ್ನು ಮಾತ್ರ ಸ್ವೀಕರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ತಾಕೀತು
ನಂತರ ಬೆಂಗಳೂರು ನಗರ್ತಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರೂ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮದನ್, ಸುರೇಶ್ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡ ಯುವರಾಜ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


