ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ ಆರಂಭ

Date:

ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಎಸ್.ಬಿ.ಜಿ ವಿದ್ಯಾಲಯದ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಸ್.ಬಿ.ಜಿ ವಿದ್ಯಾಲಯದ ವತಿಯಿಂದ ಬೆಂಗಳೂರು ವಿಭಾಗ ಮಟ್ಟದ 2024-25ನೇ ಸಾಲಿನ 14 ರಿಂದ 17 ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾ ಕೂಟವು ಮಂಗಳವಾರ ಬೆಳಗ್ಗೆ ಪ್ರಾರಂಭಗೊಂಡಿತು.

- Advertisement -

ಕ್ರೀಡಾಕೂಟಕ್ಕೆ ತುಮಕೂರು, ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಿಂದ ಕ್ರೀಡಾ ವಿದ್ಯಾರ್ಥಿಗಳು ಆಗಮಿಸಿದ್ದರು. ಒಟ್ಟು 44 ತಂಡಗಳು ಸ್ಪರ್ಧಿಸಿದ್ದವು. 17 ನೇ ವಯಸ್ಸಿನ ಬಾಲಕಿಯರ ವಿಭಾಗದಲ್ಲಿ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್‌ನ ಆದಿಚುಂಚನಗಿರಿ ಮಠದ ಎಸ್.ಬಿ.ಜಿ ವಿದ್ಯಾಲಯದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಮನಗರ ಜಿಲ್ಲೆಯ ವಿದ್ಯಾರ್ಥಿಗಳ ತಂಡ (ದ್ವಿತೀಯ ಸ್ಥಾನ) ಪಡೆದರು. 14 ನೇ ವಯಸ್ಸಿನೊಳಗಿನ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರೆ, ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬಾಲಕಿಯರ ತಂಡ (ದ್ವಿತೀಯ ಸ್ಥಾನ) ಪಡೆಯಿತು. ಬುಧವಾರದಂದು 14 ನೇ ವಯಸ್ಸಿನೊಳಗಿನ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿಭಾಗದಲ್ಲಿ 3 ತಂಡಗಳು ಹಾಗು 17 ನೇ ವಯೋಮಾನದ ವಿಭಾಗದಲ್ಲಿ 3 ತಂಡಗಳು ಸೈಮಿಫೈನಲ್ಸ್ ಮತ್ತು ಫೈನಲ್ಸ್ ಪಂದ್ಯಗಳನ್ನು ಆಡಲಿವೆ.

ತುರುವೇಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಮಾತನಾಡಿ ಓದು ಅಥವಾ ಕ್ರೀಡೆಗೆ ಯಾರು ಕಠಿಣ ಪರಿಶ್ರಮ ಹಾಕುತ್ತಾರೋ ಅವರು ಮಾತ್ರ ಒಳ್ಳೆಯ ಸ್ಥಾನಮಾನ ಪಡೆಯುತ್ತಾರೆ. ವಿದ್ಯಾರ್ಥಿಗಳು ಸೋಲು ಗೆಲುವಿನ ನಡುವೆ ಲೆಕ್ಕಾಚಾರ ಹಾಕದೇ ಕ್ರೀಡಾಸ್ಪೂರ್ತಿ ಮೆರೆಯಬೇಕೆಂದು ಕಿವಿಮಾತು ಹೇಳಿದರು.

ಈ ಸಂಧರ್ಭದಲ್ಲಿ ಆದಿಚುಂಚನಗಿರಿಯ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ.ಪರಮೇಶ್ವರಪ್ಪ, ಕರ್ನಾಟಕ ಹ್ಯಾಂಡ್ ಬಾಲ್ ಸಂಘದ ಉಪಾಧ್ಯಕ್ಷ ಪ್ರೊ.ಪುಟ್ಟರಂಗಪ್ಪ, ಖಜಾಂಚಿ ಪ್ರಕಾಶ್ ನರಗಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸಿದ್ದಪ್ಪ ನಾಗಪ್ಪ ವಾಲೀಕಾರ, ಗೋಪಾಲ ಕೃಷ್ಣ, ರಮೇಶ್ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...