ಬೆಂಗಳೂರು | ಮಾದಕ ವಸ್ತು ಕಳ್ಳಸಾಗಣೆ; ಮೂವರ ಬಂಧನ, 2.45 ಕೆಜಿ ಗಾಂಜಾ ವಶಕ್ಕೆ

Date:

Advertisements

ಮಾದಕ ವಸ್ತು ಮಾರಾಟ ಆರೋಪದಡಿ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿ, ಸುಮಾರು 2.45 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮಲ್ಲೇಶ್ವರಂ, ಆರ್.ಟಿ.ನಗರ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮಾದಕ ವಸ್ತು ಸೇವನೆ ಮಾಡುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ನಗರ ಉತ್ತರ ವಿಭಾಗದ ಒಟ್ಟು 13 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಇಂದು (ಆ.2) ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳ ತಂಡ ವಿಶೇಷ ಕಾರ್ಯಾಚರಣೆ ನಡೆಸಿ, ಎಲ್ಲಾ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಆವೇಳೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಒಟ್ಟು 180 ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿರುತ್ತದೆ. ಸದರಿ ವ್ಯಕ್ತಿಗಳ ಚಲನ ವಲನ, ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಕಲೆಹಾಕಿ, ಸದರಿಯವರುಗಳ ವಿರುದ್ಧ ಈ ಹಿಂದೆ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ವಾರೆಂಟ್, ಪ್ರೋಕ್ಷಮೇಷನ್ ಆಗಿರುವ ಬಗ್ಗೆ ಪರಿಶೀಲನೆ ಮಾಡಿ, ನ್ಯಾಯಾಲಯದ ವಿಚಾರಣೆ ವೇಳೆ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ.

WhatsApp Image 2025 08 02 at 3.05.10 PM

ಐವರು ಘೋಷಿತ ಅಪರಾಧಿ ವ್ಯಕ್ತಿಗಳನ್ನು ಮತ್ತು ಇಬ್ಬರು ವಾರೆಂಟ್ ಆರೋಪಿತರುಗಳನ್ನು ಪತ್ತೆ ಮಾಡಿ, ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೆ.ಪಿ ಆಕ್ಟ್ ಅಡಿಯಲ್ಲಿ ಹದಿನೆಂಟು ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಹಾಗೂ ಕೋಪ್ಪಾ ಕಾಯ್ದೆಯಡಿ 10 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಉದ್ಧಟತನ ತೋರಿದ ಜಿ. ಪಲ್ಲವಿಯವರ ಆಪ್ತ ಕಾರ್ಯದರ್ಶಿ ವರ್ಗ, ನಮ್ಮ ಹೋರಾಟಕ್ಕೆ ಜಯ: ಲೋಹಿತಾಕ್ಷ ಬಿ ಆರ್

ಈ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ IPS ಬಿ.ಎಸ್. ನೇಮಗೌಡ ಸೇರಿದಂತೆ 13 ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ ಪೆಕ್ಟರ್ ಗಳು, ಅಧಿಕಾರಿ ಮತ್ತು ಸಿಬ್ಬಂದಿಗಳು ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು ಮೂವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X