ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ಬೆಂಗಳೂರಿನ ಬ್ಯಾಂಕ್ ಕಚೇರಿ ಗೆಸ್ಟ್‌ಹೌಸ್‌ನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ನಾಗಭೂಷಣ್ ಹಾಗೂ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಮಾಜಿ ಮ್ಯಾನೇಜರ್ ಶೋಭಾ ಅವರ ನಿವಾಸ, ಬ್ಯಾಂಕ್‌ನ ವಾಹನದ ಮಾಜಿ ಚಾಲಕ ಶಿವಕುಮಾರ್ ನಿವಾಸದ ಮೇಲೆಯೂ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿದ್ದ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ 2014ರಲ್ಲಿ ಹಗರಣ ನಡೆದಿತ್ತು. ತನಿಖೆ ನಡೆಸಿದ್ದ ಪೊಲೀಸರು 2014ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಬಳಿಕ ಇಡಿ ಸಹ ಇಸಿಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು ಮಂಜುನಾಥ್ ಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ಪ್ರಶ್ನಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನ ಇತ್ತೀಚೆಗೆ ಹೈಕೋರ್ಟ್ ವಜಾಗೊಳಿಸಿತ್ತು.
ಇದನ್ನೂ ಓದಿ: ಬೆಂಗಳೂರು | ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ; ಬಿ ಕೆ ನಾಗರಾಜಪ್ಪ ಬಂಧನ