ಬೆಂಗಳೂರು | ಬೆಳಗಾವಿಯಲ್ಲಿ ಟಿಟಿಡಿ ದೇವಸ್ಥಾನ ನಿರ್ಮಾಣಕ್ಕೆ ಆಡಳಿತ ಮಂಡಳಿ ಅನುಮೋದನೆ: ನರೇಶ್‌ ಕುಮಾರ್‌

Date:

ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.

- Advertisement -

ಇಂದು ಬೆಂಗಳೂರು ನಗರದ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, “ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಸೆ.16ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆ ಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಲಭಿಸಲಿದೆ. ಮುಂದಿನ ದಿನಗಳಲ್ಲಿ ಟಿಟಿಡಿ ಅಧ್ಯಕ್ಷ ಬಿ ಆರ್‌ ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಮುಂದಿನ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

“ತಿರುಮಲದ ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಒದಗಿಸುವುದು ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರ ಮುಖ್ಯ ಆದ್ಯತೆಯಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ಈ ನಿಟ್ಟಿನಲ್ಲಿ ನಾವು ವಿಶೇಷ ಗಮನ ಹರಿಸುತ್ತಿದ್ದೇವೆ. ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2ರವರೆಗೆ ನಡೆಯಲಿದೆ”

“ಬ್ರಹ್ಮೋತ್ಸವವು ಸೆಪ್ಟೆಂಬರ್ 23 ರಂದು ಅಂಕುರಾರ್ಪಣಂ (ಬೀಜ ಬಿತ್ತುವುದು) ಎಂಬ ಪವಿತ್ರ ಕಾರ್ಯಕ್ರಮದೊಂದಿಗೆ ಆರಂಭವಾಗಲಿದೆ. ಇದು ಹಬ್ಬವು ಯಾವುದೇ ಅಡೆತಡೆಗಳಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ಮಾಡುವ ಧಾರ್ಮಿಕ ವಿಧಿಯಾಗಿದೆ. ಸೆಪ್ಟೆಂಬರ್ 24 ರಂದು ನಡೆಯುವ ಧ್ವಜಾರೋಹಣಂ (ಧ್ವಜಾರೋಹಣ) ಪ್ರಮುಖ ಆಕರ್ಷಣೆಯಾಗಿದ್ದು, ಗರುಡ ಧ್ವಜವನ್ನು ದೇಗುಲದ ಧ್ವಜಸ್ತಂಭದ ಮೇಲೆ ಹಾರಿಸುವುದರ ಮೂಲಕ ದೇವತೆಗಳನ್ನು ಮತ್ತು ಋಷಿಮುನಿಗಳನ್ನು ಹಬ್ಬಕ್ಕೆ ಆಹ್ವಾನಿಸಲಾಗುತ್ತದೆ”

“ಸೆಪ್ಟೆಂಬರ್ 24ರಂದು ಧ್ವಜಾರೋಹಣಂ, ರಾತ್ರಿ ಪೆದ್ದ ಶೇಷ ವಾಹನಂ, ಸೆಪ್ಟೆಂಬರ್ 28ರಂದು ಅದ್ದೂರಿಯಾಗಿ ನಡೆಯುವ ಗರುಡ ಸೇವೆ, ಅಕ್ಟೋಬರ್ 1ರಂದು ಬೆಳಗ್ಗೆ ರಥೋತ್ಸವಂ, ಅಕ್ಟೋಬರ್ 2ರಂದು ಕೊನೆಯ ದಿನ, ಚಕ್ರ ಸ್ನಾನಂ ಮತ್ತು ಧ್ವಜಾವರೋಹಣಂ (ಧ್ವಜವನ್ನು ಕೆಳಗಿಳಿಸುವುದು) ವಿಧಿಗಳೊಂದಿಗೆ ಬ್ರಹ್ಮೋತ್ಸವವು ಮುಕ್ತಾಯವಾಗುತ್ತದೆ. ಸಾಲಕಟ್ಲ ಬ್ರಹ್ಮೋತ್ಸವವನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟಿಟಿಡಿಯ ಎಲ್ಲಾ ಇಲಾಖೆಗಳು ಸೂಕ್ಷ್ಮ ಮಟ್ಟದ ಯೋಜನೆಗಳನ್ನು ಸಿದ್ಧಪಡಿಸಿವೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

“ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಸೆ. 24ರಂದು ಧ್ವಜಾರೋಹಣದ ದಿನದಂದು ಪಟ್ಟುವಸ್ತ್ರಗಳನ್ನು ಅರ್ಪಿಸುವರು ಮತ್ತು ಸೆ. 25 ರಂದು ಪಿಎಸಿ 5 ಉದ್ಘಾಟಿಸಲಿದ್ದಾರೆ. ಕಲ್ಯಾಣ ಕಟ್ಟೆಗೆ ಹೆಚ್ಚುವರಿ ಯಾಗಿ 1500 ಜನರನ್ನು ನೇಮಿಸಲಾಗಿದೆ. ಬ್ರಹ್ಮೋತ್ಸವದ ಒಂಬತ್ತು ದಿನಗಳಲ್ಲಿ ಶಿಫಾರಸು ಪತ್ರಗಳ ಮೂಲಕ ಕೊಠಡಿಗಳನ್ನು ರದ್ದುಪಡಿಸಲಾಗಿದೆ. ಈ ಅವಧಿಯಲ್ಲಿ 3,500 ಕೊಠಡಿಗಳನ್ನು ಆಫ್‌ಲೈನ್‌ನಲ್ಲಿ ಹಂಚಿಕೆ ಮಾಡಲಾಗುವುದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ವಾಹನ ಸೇವೆಗಳನ್ನು ವೀಕ್ಷಿಸಲು ಭಕ್ತರಿಗಾಗಿ 36 ಎಲ್ಇಡಿ ಪರದೆಗಳನ್ನು ಅಳವಡಿಸಲಾಗುವುದು. ಗರುಡ ಸೇವೆಯ ದಿನವನ್ನು ಹೊರತುಪಡಿಸಿ ಪ್ರತಿದಿನ 1.16 ಲಕ್ಷ ವಿಶೇಷ ದರ್ಶನ ಟಿಕೆಟ್‌ಗಳು ಮತ್ತು 25,000 ಎಸ್.ಎಸ್.ಡಿ. ಟೋಕನ್‌ಗಳನ್ನು ವಿತರಿಸಲಾಗುವುದು. ವಿಐಪಿ ಬ್ರೇಕ್ ದರ್ಶನವನ್ನು ಸ್ವತಃ ಹಾಜರಾಗುವ ವಿಐಪಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಉಳಿದ ಎಲ್ಲಾ ಸವಲತ್ತು ದರ್ಶನಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವ್ಯಾಪಕ ಶೋಧಕ್ಕೆ ಎಸ್‌ಐಟಿ ಮತ್ತೆ ಸಿದ್ಧತೆ!

“ಪ್ರತಿದಿನ 8 ಲಕ್ಷ ಲಡ್ಡುಗಳನ್ನು ಸಿದ್ಧವಾಗಿ ಇರಿಸಿಕೊಳ್ಳಲಾಗುವುದು. ಭಕ್ತರಿಗೆ ಮಾಹಿತಿ ನೀಡಲು 20 ಸಹಾಯ ಕೇಂದ್ರಗಳನ್ನು (ಹತ್ತು ಹೆಚ್ಚುವರಿ) ತೆರೆಯಲಾಗಿದೆ. ಗರುಡ ಸೇವೆ ದಿನದಂದು ಗ್ಯಾಲರಿಗಳಲ್ಲಿರುವ ಭಕ್ತರಿಗೆ 14 ಬಗೆಯ ತಿಂಡಿ-ತಿನಿಸುಗಳನ್ನು ವಿತರಿಸಲಾಗುವುದು. ಅನ್ನಪ್ರಸಾದಂ ಕಾಂಪ್ಲೆಕ್ಸ್‌ನಲ್ಲಿ ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 11 ರವರೆಗೆ ಅನ್ನಪ್ರಸಾದ ಸೇವೆ ಇರುತ್ತದೆ. ತಿರುಮಲದಲ್ಲಿ ಸುಮಾರು 4,000 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದೆ. ತಿರುಪತಿಯಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳಿಗಾಗಿ ಒಟ್ಟು 5,250 ಮತ್ತು 2,700 ಪಾರ್ಕಿಂಗ್ ಸ್ಥಳಗಳು ಲಭ್ಯವಿವೆ. ತಿರುಪತಿಯ ವಿವಿಧ ಪಾರ್ಕಿಂಗ್ ಸ್ಥಳಗಳಿಂದ ತಿರುಮಲಕ್ಕೆ ಭಕ್ತರನ್ನು ಕರೆದೊಯ್ಯಲು ಆರ್.ಟಿ.ಸಿ. ಬಸ್ಸುಗಳು ಲಭ್ಯವಿರುತ್ತವೆ. ಇತರ ದಿನಗಳಲ್ಲಿ 1,900 ಟ್ರಿಪ್‌ಗಳು ಮತ್ತು ಗರುಡ ಸೇವೆ ದಿನದಂದು 3,200 ಟ್ರಿಪ್‌ಗಳು ಇರುತ್ತವೆ. 2,000 ಟಿಟಿಡಿ ಭದ್ರತಾ ಸಿಬ್ಬಂದಿ, 4,700 ಪೊಲೀಸ್ ಸಿಬ್ಬಂದಿ, 3,500 ಶ್ರೀವಾರಿ ಸೇವಕರು ಮತ್ತು 450 ಟಿಟಿಡಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 3,000 ಸಿಸಿಟಿವಿ ಕ್ಯಾಮೆರಾಗಳನ್ನು ಕಮಾಂಡ್ ಕಂಟ್ರೋಲ್ ರೂಮ್‌ಗೆ ಸಂಪರ್ಕಿಸಲಾಗಿದೆ. ಬ್ರಹ್ಮೋತ್ಸವಕ್ಕಾಗಿ 2,300 ನೈರ್ಮಲ್ಯ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ 960 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 1,150 ಕೇಶಮುಂಡನ ಸಿಬ್ಬಂದಿಗಳು ಸೇವೆ ಸಲ್ಲಿಸಲಿದ್ದಾರೆ. 50 ವೈದ್ಯರು ಮತ್ತು 60 ಅರೆವೈದ್ಯಕೀಯ ಸಿಬ್ಬಂದಿ ಹಾಗೂ ಡಜನ್‌ಗಿಂತಲೂ ಹೆಚ್ಚು ಆಂಬ್ಯುಲೆನ್ಸ್ ಸೇವೆಗಳು ಲಭ್ಯವಿರುತ್ತವೆ. ಬ್ರಹ್ಮೋತ್ಸವದ ಸಮಯದಲ್ಲಿ ಮೊದಲ ಬಾರಿಗೆ 28 ರಾಜ್ಯಗಳಿಂದ 298 ಸಾಂಸ್ಕೃತಿಕ ತಂಡಗಳು ಪ್ರದರ್ಶನ ನೀಡಲಿವೆ. ಗರುಡ ಸೇವೆ ದಿನದಂದು 20 ರಾಜ್ಯಗಳಿಂದ 37 ತಂಡಗಳು ತಮ್ಮ ಕಲಾ ಪ್ರಕಾರಗಳನ್ನು ಪ್ರಸ್ತುತಪಡಿಸಲಿವೆ” ಎಂದು ತಿಳಿಸಿದರು.

ಬೆಂಗಳೂರು ಟಿಟಿಡಿ ದೇವಸ್ಥಾನದ ಸೂಪರಿಂಟೆಂಡೆಂಟ್ ಜಯಂತಿ ಮಾತನಾಡಿ, “ಈ 10 ದಿನಗಳ ಕಾಲ ವೈಯಾಲಿಕಾವಲ್ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಈ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಸ್ವಾಮಿಯ ವಿಶೇಷ ಅಲಂಕಾರ ಕಣ್ಣು ತುಂಬಿಕೊಳ್ಳಬಹುದಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಎಸ್ಐಆರ್ ಮೂಲಕ ಮತ ಕಳವು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

'ಬಿಜೆಪಿಯು ಎಸ್‌ಐಆರ್ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ಕಳವು ಮಾಡುತ್ತಿದೆ. ಈಗಾಗಲೇ...

ಯಲ್ಲಾಪುರ | ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ...

ವಿಶೇಷ ಶಿಕ್ಷಕರ ರಾಜ್ಯ ಪ್ರಶಸ್ತಿ: ದಾವಣಗೆರೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ...

ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು...