ಬೆಂಗಳೂರು | ಸಹೋದರಿ ಕೊಲೆ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

Date:

ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

- Advertisement -

ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಶಿಕ್ಷೆಯನ್ನು ಮಾರ್ಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಲ್ಲದೆ, 2018ರ ಜುಲೈ 26ರಂದು ಬಂಧನಕ್ಕೊಳಗಾದಾಗಿನಿಂದ 6 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ ಎಂಬ ಅಂಶವನ್ನು ಪರಿಗಣಿಸಿದ ಪೀಠ, ಅಣ್ಣಪ್ಪಗೆ ವಿಧಿಸಿದ್ದ ಶಿಕ್ಷೆಯನ್ನು ಆ ಅವಧಿಗೆ ನಿಗದಿಪಡಿಸಿ, 10,000 ರೂಗಳ ದಂಡ ಪಾವತಿಸಲು ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಸಲೂನ್ ನಡೆಸುತ್ತಿದ್ದ ಅಣ್ಣಪ್ಪ ಭಂಡಾರಿ 2018ರ ಜುಲೈ 22ರಂದು ತನ್ನ ಸಹೋದರಿ ವಿಜಯ ಭಂಡಾರಿ ಜೊತೆ ಜಗಳವಾಡಿದ್ದ. ಅಣ್ಣಪ್ಪ ಭಂಡಾರಿ ತನ್ನ ಸಹೋದರಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದು, ವಿಜಯಾ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ವಿಜಯಾರ ಎಡಭುಜದ ಬಳಿ, ಬೆನ್ನಿನ ಬಲಭಾಗದಲ್ಲಿ ಗಾಯಗಳಾಗಿದ್ದವು. ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಜುಲೈ 28ರಂದು ಆಕೆ ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಪ್ರತ್ಯಕ್ಷ ಸಾಕ್ಷ್ಯಾಧಾರಗಳಾದ ಮೃತ ವಿಜಯಾ ಸಹೋದರಿ ಮತ್ತು ಸೋದರಳಿಯ, ಸುಶೀಲಾ ಮತ್ತು ಕಮಲಾಕ್ಷಿ ಎಂಬುವರ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿ ಅಣ್ಣಪ್ಪ ಭಂಡಾರಿಗೆ ಕೊಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆ ಪ್ರಶ್ನಿಸಿ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಗಾಯವು ಕುತ್ತಿಗೆ ಭಾಗದ ರಕ್ತನಾಳಗಳಿಗೆ ಹಾನಿಯಾಗದಂತೆ ಮೇಲ್ನೋಟಕ್ಕೆ ಕಾಣುತ್ತದೆ. ಆರಂಭಿಕ ಹಂತದಲ್ಲಿ ಗಮನಿಸಲಾದ ನಾಡಿಮಿಡಿತ ಮತ್ತು ರಕ್ತದೊತ್ತಡದಲ್ಲಿ (ಬಿಪಿ) ಯಾವುದೇ ಹೃದಯ ಸಂಬಂಧಿತ ಸಮಸ್ಯೆ ಅಥವಾ ಕಾಯಿಲೆಯನ್ನು ನಿರೀಕ್ಷಿಸಲು ಅಸಹಜವಾಗಿ ಹೆಚ್ಚಾಗಿರಲಿಲ್ಲ. ಈ ದೃಷ್ಟಿಕೋನದಲ್ಲಿ ಮೃತ ವಿಜಯಾ ಭಂಡಾರಿಗೆ ತಮಗಾದ ಗಾಯಗಳಿಂದಾಗಿ ಹೃದಯಸ್ತಂಭನ ಸಂಭವಿಸಿದೆ ಎಂಬ ವೈದ್ಯರ ಅಭಿಪ್ರಾಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...