ಬೆಂಗಳೂರು | ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಕುಟುಂಬಕ್ಕೆ ಮನೆ ಹಕ್ಕುಪತ್ರ ವಿತರಣೆ

Date:

ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭಾ ಕ್ಷೇತ್ರಗಳ, ಹಕ್ಕಿಪಿಕ್ಕಿ-ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಒಟ್ಟು 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರ ವಿತರಿಸಿದರು.

- Advertisement -

ಮೊದಲ ಬಾರಿಗೆ ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರು, ಕುಷ್ಠರೋಗದಿಂದ ಗುಣಮುಖರಾದ ಕುಟುಂಬಗಳಿಗೆ ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರ ನೀಡಿರುವುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯಶವಂತಪುರ ಕ್ಷೇತ್ರದ ಯಲಚಗುಪ್ಪೆಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ 228 ಕುಟುಂಬಗಳಿಗೆ ಹಾಗೂ ಮಾದಿಗರ ಚನ್ನಯ್ಯ ಸ್ಲಂನಲ್ಲಿ 259 ಹಕ್ಕುಪತ್ರ, ಇದೇ ಗ್ರಾಮದಲ್ಲಿರುವ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಲೆಮಾರಿ ಸಮುದಾಯದ 200 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ನೀಡಲಾಯಿತು.

ಹಕ್ಕುಪತ್ರ ವಿತರಣೆ

ಯಲಹಂಕ ಕ್ಷೇತ್ರದ ಗಿಡ್ಡೇನಹಳ್ಳಿ ಗ್ರಾಮದ ಬಿಕೆ ಸ್ಲಂನಲ್ಲಿ 40 ಕುಟುಂಬಗಳಿಗೆ ಮಂಜೂರಾತಿ ಪತ್ರ ನೀಡಲಾಯಿತು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾತಾಪುರ ದಲಿತ ಕಾಲೋನಿಯಲ್ಲಿ ಕುಷ್ಠರೊಗದಿಂದ ಗುಣಮುಖರಾದ 50 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಲಾಯಿತು.

ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಶಾಸಕ ಎಸ್ ಟಿ ಸೋಮಶೇಖರ್, ಕುಸುಮ ಹನುಮಂತರಾಯಪ್ಪ, ಸ್ಲಂ ಬೋರ್ಡ್ ಆಯುಕ್ತ ಅಶೋಕ್, ಚೀಫ್ ಎಂಜಿನಿಯರ್ ಸುದೀರ್, ತಾಂತ್ರಿಕ ಸಲಹೆಗಾರ ಬಾಲರಾಜ್, ಸ್ಥಳೀಯ ಮುಖಂಡ ಗಣೇಶ್ ಇದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಪ್ರಕರಣ; ಜೆಡಿಎಸ್ ಶಾಸಕಿ ಪುತ್ರನಿಗೆ ಬಂಧನದ ವಾರೆಂಟ್

ಯಶವಂತಪುರ ಕ್ಷೇತ್ರದ ಯಲಚಗುಪ್ಪೆ ಗ್ರಾಮದ ಮಾದಾರ ಚನ್ನಯ್ಯ ಸ್ಲಂನಲ್ಲಿ ಮನೆ ಮಂಜೂರಾತಿ ಪತ್ರ ವಿತರಿಸಿದ ಜಮೀರ್ ಅಹಮದ್ ಖಾನ್ ಅವರು ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರ ಜತೆ ಅಲ್ಲೇ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಶರಣಯ್ಯ ಎಂಬುವರ ಶೆಡ್‌ನಲ್ಲಿ ಅವರ ಕುಟುಂಬ ಸದಸ್ಯರ ಜತೆ ಊಟ ಮಾಡಿದರು.

ಶೆಡ್‌ನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆದಷ್ಟು ಶೀಘ್ರ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ತಮ್ಮ ಶೆಡ್‌ನಲ್ಲಿ ಸಚಿವರು ಬಂದು ಊಟ ಮಾಡಿದ್ದು ನಮ್ಮ ಭಾಗ್ಯ. ನಾವು ಮಾಡಿದ್ದ ಅಡುಗೆಯನ್ನು ಬಡಿಸುವಂತೆ ಪ್ರೀತಿಯಿಂದ ಕೇಳಿ ಊಟ ಮಾಡಿದರು. ಅವರ ಸರಳತೆಗೆ ಇದು ಸಾಕ್ಷಿ” ಎಂದು ಶರಣಯ್ಯ ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...