ಬೆಂಗಳೂರು | ‘ಒತ್ತುವರಿ’ ಆರೋಪ: ದಾಖಲೆಗಳಿದ್ದರೂ ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿದ ಅರಣ್ಯಾಧಿಕಾರಿ!

Date:

ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಗ್ಗೆ ಎಲ್ಲ ದಾಖಲೆಗಳಿದ್ದರೂ ಕೂಡ ಒತ್ತುವರಿ ಆರೋಪಿಸಿ ಅರಣ್ಯಾಧಿಕಾರಿಯೋರ್ವರು ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿ, ಕೃಷಿಕರು ಬೆಳೆದಿದ್ದ ಬೆಳೆಯನ್ನು ಹಾಳುಗಡೆವಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರು ನಗರದ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಗಂಗಸಂದ್ರ ಸಮೀಪದ ಕಗ್ಗಲೀಪುರದ ನಾಲ್ವರು ರೈತರ ಜಮೀನಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿಯಾಗಿರುವ ಗೋವಿಂದರಾಜು ಎಂಬುವವರು ಏಕಾಏಕಿ ಜೆಸಿಬಿ ನುಗ್ಗಿಸಿ, ಬೆಳೆ ಹಾನಿಗೈದಿರುವುದಾಗಿ ಈ ದಿನ.ಕಾಮ್‌ಗೆ ರೈತರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ದಯಾನಂದ್ ಅವರಿಗೂ ಕೂಡ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಗಂಗಸಂದ್ರದ ನಾಲ್ವರು ರೈತರಾಗಿರುವ ಹಾಗೂ ದಲಿತ ಸಮುದಾಯಕ್ಕೆ ಸೇರಿದ ಎಂ ರಮೇಶ್, ಶಿವಮ್ಮ, ವರಲಕ್ಷ್ಮೀ ಹಾಗೂ ಸಿದ್ದಪ್ಪ ಎಂಬುವವರ ಜಮೀನಿಗೆ ಜೆಸಿಬಿ ನುಗ್ಗಿಸಿರುವ ಆರೋಪ ಕೇಳಿಬಂದಿದೆ.

WhatsApp Image 2024 08 26 at 3.10.52 PM

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ರೈತ ಎಂ ರಮೇಶ್, “ಸರ್ವೆ ನಂಬರ್ 40ರಲ್ಲಿ ಸುಮಾರು 8 ಎಕರೆ ಬಡವರಿಗೆ ಆಗಿರುವ ಜಾಗವಿದೆ. ನಮ್ಮ ಜಮೀನಿನ ಬಗ್ಗೆ ಸರ್ಕಾರವೇ ನೀಡಿರುವ ದಾಖಲೆಗಳಿವೆ. ಆದರೂ ಕೂಡ ಒತ್ತುವರಿ ಆರೋಪಿಸಿ ಕಗ್ಗಲೀಪುರ ಅರಣ್ಯಾಧಿಕಾರಿಗಳು ನಮ್ಮ ಜಮೀನಿಗೆ ಜೆಸಿಬಿ ನುಗ್ಗಿಸಿ, ನಮ್ಮ ಬೆಳೆಗಳನ್ನು ಹಾಳುಗಡೆವಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಯಾರದೋ ಮಾತು ಕೇಳಿಕೊಂಡು ಈ ರೀತಿ ನಡೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕಳೆದ ಒಂದು ತಿಂಗಳಿನಿಂದ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನ ಸೇರಿದಂತೆ ಎಸ್‌ಪಿ, ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ದೂರು ಕೊಟ್ಟಿದ್ದೇವೆ. ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಇನ್ನೂ ಜಂಟಿ ಸರ್ವೆ ನಡೆಸಿಲ್ಲ. 2005ರಿಂದಲೇ ನಮ್ಮದು ಹಿಡುವಳಿ ಜಾಗ ಅಂತ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ, ದಾಖಲೆ ನೀಡಿದ್ದಾರೆ. ಎಲ್ಲರಿಗೂ ನಕ್ಷೆ, ಪಹಣಿ, ಕಂಪ್ಯೂಟರ್ ಪಹಣಿ ಇದ್ದರೂ ಕೂಡ ಯಾವುದೇ ಮುನ್ಸೂಚನೆ ನೀಡದೆ, ನಮ್ಮ ಜಮೀನುಗಳಿಗೆ ಅರಣ್ಯ ಇಲಾಖೆಯವರು ಜೆಸಿಬಿ ನುಗ್ಗಿಸಿದ್ದಾರೆ. ಇದರಿಂದ ನಾವು ಬೆಳೆದಿದ್ದ ಹುರುಳಿಕಾಳು, ಅವರೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿದೆ. ಈ ಸಂಬಂಧ ಮತ್ತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ. ಜೊತೆಗೆ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದೇವೆ. ಯಾವುದೇ ಕಾರಣಕ್ಕೂ ನಮ್ಮ ಜಮೀನನ್ನು ನಾವು ಬಿಡುವುದಿಲ್ಲ” ಎಂದು ರೈತ ಎಂ ರಮೇಶ್ ತಿಳಿಸಿದ್ದಾರೆ.

“ನಮ್ಮ ತಾತನ ಕಾಲದಿಂದಲೂ ಉಳುಮೆ ಮಾಡುತ್ತಿದ್ದೇವೆ. ಏಕಾಏಕಿ ಅರಣ್ಯ ಇಲಾಖೆಯವರು ನಮ್ಮ ಜಮೀನಿಗೆ ಜೆಸಿಬಿ ನುಗ್ಗಿಸುವ ಮೂಲಕ ನಮ್ಮ ಹೊಟ್ಟೆಯ ಮೇಲೆ ಹೊಡೀತಿದ್ದಾರೆ. ನಮ್ಮ ಹೊಲಕ್ಕೂ ಹೋಗಲು ಬಿಡುತ್ತಿಲ್ಲ. ಎಲ್ಲ ಕಡೆ ಓಡಾಡಿದರೂ ನಮಗೆ ನ್ಯಾಯ ಸಿಕ್ಕಿಲ್ಲ” ಎಂದು ಸಂತ್ರಸ್ತೆ ವರಲಕ್ಷ್ಮೀ ಈ ದಿನ.ಕಾಮ್ ಜೊತೆಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತೆ ರೈತ ಮಹಿಳೆ ಶಿವಮ್ಮ ಮಾತನಾಡಿ, “ನಮಗೆ ಅರಣ್ಯ ಇಲಾಖೆಯವರು ಕೊಡಬಾರದ ಕಷ್ಟ ಕೊಡ್ತಿದ್ದಾರೆ. ನಾವು ಕೃಷಿ ಮಾಡುತ್ತಿದ್ದರಿಂದಲೇ ನಮಗೆ ಸರ್ಕಾರ ದಾಖಲೆ ನೀಡಿದೆ. ಈಗ ಅರಣ್ಯ ಇಲಾಖೆಯವರು ಒತ್ತುವರಿ ಆರೋಪಿಸಿ ಜಮೀನಿಗೆ ಜೆಸಿಬಿ ನುಗ್ಗಿಸಿ, ಗುಂಡಿ ತೋಡಿಸಿದ್ದಾರೆ. ಯಾವುದೇ ಕೋರ್ಟಿಗೆ ಹೋದರೂ, ನಮ್ಮ ಜಮೀನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದ್ದಾರೆ.

image 2 1
ಸಂತ್ರಸ್ತೆ ವರಲಕ್ಷ್ಮೀ ಹಾಗೂ ಶಿವಮ್ಮ

“ಕಗ್ಗಲೀಪುರ ಅರಣ್ಯ ಇಲಾಖೆಯ ಅಧಿಕಾರಿಗಳು ನಾವು ಬೆಳೆದಿದ್ದ ಎಳ್ಳು, ಅಲಸಂಡೆ, ತೊಗರಿ ಗಿಡಗಳ ಮೇಲೆ ರಾತ್ರೋರಾತ್ರಿ ಜೆಸಿಬಿ ನುಗ್ಗಿಸವ್ರೆ. ಗುಂಡಿ ತೋಡಿಸವ್ರೆ. ನಮಗೆ ಇಲ್ಲದ ಕಷ್ಟ ಕೊಡ್ತವ್ರೆ. ಎಷ್ಟೇ ಹೇಳಿದ್ರೂ ಕೇಳಲ್ಲ” ಎಂದು ಸಂತ್ರಸ್ತ ರೈತ ಸಿದ್ದಪ್ಪ ತಮ್ಮ ನೋವು ತೋಡಿಕೊಂಡಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರ್‌ ಅವರಿಗೆ ಜಿಲ್ಲಾಧಿಕಾರಿ ಪತ್ರ

ಇನ್ನು ಈ ಬೆಳವಣಿಗೆಗೆ ಸಂಬಂಧಿಸಿ ಸಂತ್ರಸ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ದಯಾನಂದ್ ಅವರಿಗೆ ಕೂಡ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಅವರು ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

image 5 1
ಸಂತ್ರಸ್ತ ರೈತ ಸಿದ್ದಪ್ಪ

ಈ ನಿರ್ದೇಶನದಲ್ಲಿ, ಕಗ್ಗಲೀಪುರ ಗ್ರಾಮದ ಸರ್ವೆ ನಂ. 40 ಮತ್ತು 24ರಲ್ಲಿ ಸಂತ್ರಸ್ತರು ಸುಮಾರು 100 ರಿಂದ 120 ವರ್ಷಗಳಿಂದ ವಾಸವಾಗಿದ್ದಾರೆ. ಬಗರ್‌ಹುಕುಂ ಸಾಗುವಳಿ ಮಾಡುತ್ತಾ ಬಂದಿದ್ದು, ಕಂದಾಯ ಇಲಾಖೆಯಿಂದ ಗಣಕೀಕೃತ ಪಹಣಿ, ಎಂ.ಆ‌ರ್. ನಕ್ಷೆ ಮತ್ತು ಸಾಗುವಳಿ ಚೀಟಿಯನ್ನು ಕೊಡಲಾಗಿದೆ. ಅದೇ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಏಕಾಏಕಿ ಬಂದು ಜಮೀನಿನಲ್ಲಿ ಬೆಳೆದಿರುವ ಎಳ್ಳು, ತೊಗರಿ, ಅಲಸಂದೆ, ಮುಂತಾದ ಬೆಳೆಗಳನ್ನು ನಾಶ ಮಾಡಿರುತ್ತಾರೆ ಎಂದು ದೂರು ನೀಡಿದ್ದಾರೆ. ಆದ್ದರಿಂದ, ಇದರ ಬಗ್ಗೆ ಸ್ಥಳೀಯ ಅರಣ ಇಲಾಖೆಯ ಅಧಿಕಾರಿಗಳನ್ನು ಸಂರ್ಪಕಿಸಿಕೊಂಡು, ದೂರಿನಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಬೇಕು. ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಅರ್ಜಿದಾರರಿಗೆ ನೇರವಾಗಿ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಅರಣ್ಯ ಇಲಾಖೆ 1

ರೈತರ ವಿರುದ್ಧವೇ ದೂರು ನೀಡಿದ ಅರಣ್ಯ ಇಲಾಖೆ!

ಈ ನಡುವೆ ಸಂತ್ರಸ್ತ ರೈತರ ವಿರುದ್ಧವೇ ಕಗ್ಗಲೀಪುರ ಅರಣ್ಯ ಇಲಾಖೆಯವರು ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಕಗ್ಗಲೀಪುರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ, “ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ 100 ಗಿಡಗಳನ್ನು ಕಿತ್ತು ಹಾಕಿದ್ದು, ಸರ್ಕಾರಿ ಸೊತ್ತುಗಳನ್ನು ಹಾಳುಗೆಡವಿದ್ದಾರೆ. ಈ ಸಂಬಂಧ ಸೂಖ್ತ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

WhatsApp Image 2024 08 23 at 10.37.10 AM
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...