ಬೆಂಗಳೂರು | KSMCAಯಿಂದ ಸರ್ಕಾರಕ್ಕೆ ₹34.13 ಕೋಟಿಗಳ ವಿಶೇಷ ಲಾಭಾಂಶ ಹಸ್ತಾಂತರ

Date:

ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ (KSMCA) ಕಂಪನಿಯು ತನ್ನ ವಿಶೇಷ ಲಾಭಾಂಶದ ಮೊತ್ತ ₹34.13 ಕೋಟಿಗಳನ್ನು ಗುರುವಾರ ಸರ್ಕಾರಕ್ಕೆ ಹಸ್ತಾಂತರಿಸಿದೆ.

- Advertisement -

ಕಂಪನಿಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಮತ್ತು ಕೆಎಸ್‌ಎಂಸಿಎ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸತೀಶ್ ಕೃಷ್ಣ ಸೈಲ್ ಅವರು ವಿಧಾನಸೌಧದಲ್ಲಿ ವಿಶೇಷ ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆಯಿoದ ಕೈಬಿಟ್ಟು ಹೋಗಿರುವುದರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭದಾಯಕತೆ ಕಡಿಮೆಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎ ಸಂಸ್ಥೆಗೆ ವಹಿಸಿಕೊಡಬೇಕೆಂದು ಹಾಗೂ ಸಂಸ್ಥೆಯ ಆರ್ಥಿಕಾಭಿವೃದ್ಧಿಗೆ ಬೆಂಬಲಿಸಬೇಕೆ0ದು ಕೋರಿದರು.

ಇದನ್ನೂ ಓದಿ:ಬೆಂಗಳೂರು | ಏಕಾಏಕಿ ಮನೆ ಡೆಮಾಲಿಷನ್‌; ಬೀದಿಗೆ ಬಿದ್ದ 30ಕ್ಕೂ ಹೆಚ್ಚು ಕುಟುಂಬಗಳು

ಈ ವೇಳೆ ಶಾಸಕ ಅಧ್ಯಕ್ಷ ಸತೀಶ ಸೈಲ್ ಮಾತನಾಡಿ, “ಸರ್ಕಾರವು ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರ್ಪಡೆ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕು” ಎಂದು ವಿನಂತಿಸಿದರು.‌

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಪಿ ಎಸ್ ನಂದೀಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...