ಬೆಂಗಳೂರು | ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನ; ತಪ್ಪಿದಲ್ಲಿ ಡಬಲ್ ದಂಡ

Date:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನವಾಗಿದ್ದು, ಪಾವತಿ ಮಾಡದೇ ಇದ್ದಲ್ಲಿ ಡಬಲ್ ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕಿದೆ ಎಂದು ಬಿಬಿಎಂಪಿ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ.

- Advertisement -

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌, ”ಬಿಬಿಎಂಪಿಯು 2024-25ನೇ ಸಾಲಿನಲ್ಲಿ ಅಂದಾಜು ₹5,210 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಿತ್ತು. ಆದರೆ, ಈವರೆಗೆ ₹4604 ಕೋಟಿ (ಶೇ 88.36) ವಸೂಲಾಗಿದೆ. ಆರ್ಥಿಕ ವರ್ಷಾಂತ್ಯಕ್ಕೆ 15 ದಿನಗಳಷ್ಟೇ ಬಾಕಿ ಉಳಿದಿದ್ದು, ಬಾಕಿ ಆಸ್ತಿ ತೆರಿಗೆ ವಸೂಲಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಏಪ್ರಿಲ್‌ 1ರ ಬಳಿಕ ಆಸ್ತಿ ತೆರಿಗೆ ಎಷ್ಟು ಬಾಕಿ ಇದೆಯೋ ಅಷ್ಟೇ ದಂಡವನ್ನೂ ಆಸ್ತಿ ಮಾಲಿಕರು ಪಾವತಿಸಬೇಕಾಗಿದೆ. ಜೊತೆಗೆ ವಾರ್ಷಿಕ 15% ಬಡ್ಡಿ ದರವೂ ಇರಲಿದೆ. ಈ ಹಿಂದೆ ಆಸ್ತಿ ತೆರಿಗೆಯ ದುಪ್ಪಟ್ಟು ಮೌಲ್ಯದ ದಂಡ ಪಾವತಿಸಬೇಕಿತ್ತು. ಆದರೆ ಸರ್ಕಾರ ಇದನ್ನು ಕಡಿತಗೊಳಿಸಿ ಆಸ್ತಿ ತೆರಿಗೆಯ ಸಮಾನ ಹಣವನ್ನು ದಂಡವಾಗಿ ಕಟ್ಟಲು ಸೂಚಿಸಿದೆ. ಅಂದರೆ ₹100 ಆಸ್ತಿ ತೆರಿಗೆ ಬಾಕಿ ಇದ್ದರೆ, ಇದರ ಮೇಲೆ ಮತ್ತೆ ₹100 ದಂಡ ಬೀಳಲಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇದನ್ನೂ ಓದಿ: ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಪ್ರಸ್ತುತ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1,82,467 ಆಸ್ತಿ ಮಾಲಿಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಮಹದೇವಪುರ, ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಬಾಕಿ ಇದ್ದು, ಇವರಿಗೆ 100% ದಂಡದ ಜೊತೆ 15% ಬಡ್ಡಿ ಬೀಳಲಿದೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...