ಬೆಂಗಳೂರು | ದುರುಳರ ಕಾಟಕ್ಕೆ ಅಪ್ರಾಪ್ತೆ ಬಲಿ: ಕಿಡ್ನ್ಯಾಪ್, ಪೋಕ್ಸೊ ಕೇಸ್‌ನಡಿ ಆರೋಪಿಗಳ ಬಂಧನ

Date:

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತೆ ಹಿಂದೆ ಬಿದ್ದಿದ್ದ ದುರುಳರು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ‌, ಅಪಘಾತ ಸಂಭವಿಸಿದ್ದು, ಅಪ್ರಾಪ್ತೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಓರ್ವ ಬಾಲಾಪರಾಧಿ ಸೇರಿದಂತೆ ಮನೋಜ್, ಇರ್ಫಾನ್, ಮುಬಾರಕ್ ಎಂಬ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಪೋಕ್ಸೊ ಕಾಯಿದೆ ಮತ್ತು ಕಿಡ್ನ್ಯಾಪ್ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮನೋಜ್ ಎಂಬ ಯುವಕ 9ನೇ ತರಗತಿಯ ಬಾಲಕಿ ಹಿಂದೆ ಬಿದ್ದಿದ್ದನು. ಪದೇ ಪದೆ ಕರೆಮಾಡಿ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಅಕ್ಟೋಬರ್ 24ರಂದು ಮನೋಜ್ ಮತ್ತು ಸ್ನೇಹಿತರು 2 ಬೈಕ್‌ಗಳಲ್ಲಿ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿ ಹೊಸಕೋಟೆ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.

ಬಾಲಕಿ ಮತ್ತು ಮನೋಜ್ ಒಂದು ಬೈಕಿನಲ್ಲಿದ್ದರೆ, ಈತನ ಇಬ್ಬರು ಸ್ನೇಹಿತರು ಮತ್ತೊಂದು ಬೈಕ್‌ನಲ್ಲಿದ್ದರು. ಹೊಸಕೋಟೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಂತರ ಹೊಸಕೋಟೆ ಪೊಲೀಸರು ಬಾಲಕಿ ಪೋಷಕರಿಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ಎಸ್‌ಐಟಿಗೆ ನಿರ್ದೇಶಿಸಿ: ಸಿಎಂಗೆ ಮಹಿಳಾ ಸಂಘಟನೆಗಳಿಂದ ಮನವಿ

“ಆರೋಪಿಗಳು ಬಲವಂತವಾಗಿ ನನ್ನ ಮಗಳನ್ನು ಕರೆದುಕೊಂಡು ಹೋಗಿ, ಲೈಂಗಿಕವಾಗಿ ಅವಳನ್ನು ಬಳಸಿಕೊಳ್ಳಲು ಯತ್ನಿಸಿದ್ದಾರೆ. ಅವಳನ್ನು ಅಪಹರಣ ಮಾಡುವಾಗ ಮಾರ್ಗಮಧ್ಯೆ ನಡೆದ ಅಪಘಾತದಲ್ಲಿ ಅವಳು ಮೃತಪಟ್ಟಿದ್ದಾಳೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...