ಬೆಂಗಳೂರು | ಕೆಆರ್ ಪುರಂನ ʼಮಸ್ಜಿದ್ ಎ ನೂರ್‌ʼ ನಲ್ಲಿ ಮಸೀದಿ ದರ್ಶನ ಕಾರ್ಯಕ್ರಮ

Date:

ಮಸೀದಿಗಳ ಕುರಿತಂತೆ ಜನಸಾಮಾನ್ಯರಿಗೆ ಇರುವ ಕುತೂಹಲವನ್ನು ತಣಿಸಲು ಮಸೀದಿ ದರ್ಶನ ಕಾರ್ಯಕ್ರಮವನ್ನು ನಗರದ ಕೆಆರ್ ಪುರಂ ಮೆಟ್ರೋ ರೈಲು ನಿಲ್ದಾಣದ ಬಳಿಯಿರುವ ಮಸ್ಜಿದ್ ಎ ನೂರ್ ಅಲ್ಲಿ ಆಯೋಜಿಸಲಾಗಿತ್ತು.

- Advertisement -

ಸಾರ್ವಜನಿಕರಲ್ಲಿ ಮಸೀದಿ, ಮುಸ್ಲಿಮರ ಆರಾಧನೆಗಳು, ಕಾರ್ಯ ಚಟುವಟಿಕೆಗಳು ಹಾಗೂ ಮಸ್ಜಿದ್ ಬಗ್ಗೆ ಇರುವ ತಪ್ಪು ಕಲ್ಪನೆಗಳು, ಪೂರ್ವಾಗ್ರಹಗಳನ್ನು ನಿವಾರಿಸಿ ಪರಸ್ಪರ ಸೌಹಾರ್ದ, ನಂಬಿಕೆ/ವಿಶ್ವಾಸಗಳನ್ನು ಮೂಡಿಸುವಂತಹ ಒಂದು ಅಪರೂಪದ ಕ್ಷಣಗಳಿಗೆ ಮಸೀದಿ ದರ್ಶನ ಕಾರ್ಯಕ್ರಮವು ಸಾಕ್ಷಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಮಸೀದಿ, ನಮಾಜ್ ನ ಕ್ರಮ, ಸಾಮೂಹಿಕ ನಮಾಜ್, ನಮಾಜ್ ಮುಂಚಿತವಾಗಿ ನಿರ್ವಹಿಸುವ ಅಂಗಸ್ನಾನ (ವುಜೂ) ಮಿಂಬರ್ (ಭಾಷಣ ಪೀಠ), ಮೆಹ್ರಾಬ್ (ನಮಾಜ್ ಗೆ ನೇತೃತ್ವ ವಹಿಸುವ ಸ್ಥಳ, ಆಜಾನ್ (ನಮಾಜಗಾಗಿ ಕರೆ), ಮಸೀದಿಯಲ್ಲಿ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳು ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಪರಸ್ಪರರನ್ನು ಅರಿಯುವ, ಹೃದಯಗಳನ್ನು ‘ಸಮುದಾಯಗಳನ್ನು’ ಬೆಸೆಯುವ ಇಂತಹ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ, ಈ ಮೂಲಕ ಕೋಮು ದ್ವೇಷ, ಅಪನಂಬಿಕೆಗಳಿಗೆ ಕಡಿವಾಣ ಹಾಕಿ, ಪರಸ್ಪರ ಬೆರೆಯುವ/ಅರಿಯುವ ಮೂಲಕ ಸಮಾಜ ಮತ್ತು ದೇಶವನ್ನು ಕಟ್ಟುವ ಕೆಲಸವನ್ನು ಈ ಮೂಲಕ ನಡೆಸಲಾಗುತ್ತಿದೆ‌.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಗವಾಯಿ ಬೌದ್ಧತತ್ವವೂ ಬಿಜೆಪಿಗರ ಮನುವಾದವೂ

ಮಸೀದ್ ಎ ನೂರ್ ಆಡಳಿತದ ಸಮೀತಿಯ ಅಧ್ಯಕ್ಷ ದಾವೂದ್, ಪದಾಧಿಕಾರಿಗಳು, ಜಮಾಅತೆ ಇಸ್ಲಾಮಿ ಹಿಂದ್ ಬೆಂಗಳೂರು ನಗರ ಸಂಚಾಲಕಾದ ಶೇಖ್ ಹಾರೂನ್ ಸಪ್ದರ್, ರಾಜ್ಯ ಕಾರ್ಯದರ್ಶಿ ಮೌಲಾನಾ ಲಬೀದ್ ಶಾಫಿ, ಹೀರಾ ಪೌಂಡೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಶಮೀರ್, ಹಂಜಾ ಕುಂಜ್, ಜಮಾಅತ್ ಸದಸ್ಯರಾದ ಮಸೂದ್ ಶರೀಫ್ ಉಪಸ್ಥಿತರಿದ್ದರು.

ಗೈಡ್ ಆಗಿ ಮೊಹಮ್ಮದ್ ನವಾಜ್, ರಂಶೀದ್, ಮೊಹಮ್ಮದ್ ಇಸಾಕ್, ಸಯ್ಯದ್ ಮುರಾದ್, ಮಹಮ್ಮದ್ ಪೀರ್ ಲಟಗೇರಿ ರವರು ಕನ್ನಡ, ಇಂಗ್ಲಿಷ್ ಮತ್ತು ಇತರೆ ಭಾಷೆಗಳಲ್ಲಿ ಮಸೀದಿ ಕುರಿತು ವಿವರಣೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...