ಬೆಂಗಳೂರು | ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ: ಕೃಷಿ ಇಲಾಖೆ

Date:

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕವನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

- Advertisement -

ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ. ರಾಜ್ಯದ ಬೆಳೆ ಪದ್ಧತಿಯನ್ನು ಆಧರಿಸಿ ಮುಂಗಾರು ಹಂಗಾಮಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಕ್ಕೆ 12.95 ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ 11.17 ಲಕ್ಷ ಮೆ.ಟನ್ ಹಂಚಿಕೆ ನಿಗದಿಪಡಿಸಲಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 3.02ಲಕ್ಷ ಮೆ.ಟನ್ ಡಿ.ಎ.ಪಿ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 2.21 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 81,000 ಮೆ.ಟನ್ ಸರಬರಾಜು ಬಾಕಿ ಇರುತ್ತದೆ. ರಾಜ್ಯದಲ್ಲಿ ಡಿ.ಎ.ಪಿ. ಕೊರತೆ ಕಂಡು ಬಂದಾಗ ಕೃಷಿ ಸಚಿವರ ನಿರ್ದೇಶನದಂತೆ ಪರ್ಯಾಯ ರಸಗೊಬ್ಬರಗಳ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಿ, ಪ್ರಸ್ತುತ, ಡಿ.ಎ.ಪಿ. ರಸಗೊಬ್ಬರದ ಕೊರತೆಯನ್ನು ನೀಗಿಸಲಾಗಿದೆ. ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 6.80ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 5.35 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 1.45 ಲಕ್ಷ ಮೆ.ಟನ್ ಸರಬರಾಜು ಬಾಕಿ ಇರುತ್ತದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಸರಬರಾಜು ಮಾಡಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಎಲ್ಲಾ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಭಾಯಿಸಲಾಗಿರುತ್ತದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕೇಂದ್ರ ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆ ವತಿಯಿಂದ ಏಪ್ರಿಲ್ ಮಾಹೆಯಿಂದ ಇಲ್ಲಿಯವರೆಗೆ ಆರು ಬಾರಿ ಪತ್ರಗಳನ್ನು ಬರೆದು ಹಂಚಿಕೆಗೆ ಅನುಗುಣವಾಗಿ ಅವಶ್ಯವಿರುವ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಲಾಗಿರುತ್ತದೆ. ರಾಜ್ಯದ ಕೃಷಿ ಸಚಿವರು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ ಅಗತ್ಯವಿರುವ ಡಿ.ಎ.ಪಿ. ರಸಗೊಬ್ಬರದ ಪೂರೈಕೆಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ಅಲ್ಲದೇ, ಕೃಷಿ ಸಚಿವರೇ ಖುದ್ದಾಗಿ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನು ಇದೇ ಜುಲೈ 7 ರಂದು ಭೇಟಿ ಮಾಡಿ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಿರುತ್ತಾರೆ.

ರಾಜ್ಯದಲ್ಲಿ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರದ ಕಡಿಮೆ ಪೂರೈಕೆಯನ್ನು ಮನಗಂಡು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ, ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಜುಲೈ 17 ಮತ್ತು 25ರಂದು ಪತ್ರ ಮುಖೇನ ಮನವಿ ಸಲ್ಲಿಸಿರುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರದಿಂದ ಹಂಚಿಕೆಗನುಗುಣವಾಗಿ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡದಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಕಂಡು ಬಂದಿರುತ್ತದೆ. ಈ ಸಂಬಂಧವಾಗಿ ರೈತರು ವಿವಿಧ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರದ ಪೂರೈಕೆ ಬಗ್ಗೆ ಅಹವಾಲುಗಳನ್ನು ಸಲ್ಲಿಸಿರುತ್ತಾರೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮುಂಚಿತವಾಗಿ ಉತ್ತಮ ಮಳೆಯಾಗಿದ್ದು, ಸಾಮಾನ್ಯ ಅವಧಿಗಿಂತ ಮುಂಚೆ ಬಿತ್ತನೆ ಪ್ರಾರಂಭವಾಗಿದೆ. ಇಲ್ಲಿಯವರೆಗೆ ಬಿತ್ತನೆ ವಿಸ್ತೀರ್ಣ ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಹೆಚ್ಚಾಗಿರುತ್ತದೆ. ಹೆಚ್ಚು ರಸಗೊಬ್ಬರ ಅವಶ್ಯವಿರುವ ಮುಸುಕಿನ ಜೋಳದ ವಿಸ್ತೀರ್ಣವು ಅಂದಾಜು 2.00ಲಕ್ಷ ಹೆಕ್ಟೇರ್ ಗಣನೀಯವಾಗಿ ಹೆಚ್ಚಳವಾಗಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಂದಾಜು 13,000 ಹೆಕ್ಟೇರ್ ಪ್ರದೇಶದಲ್ಲಿ ಮರುಬಿತ್ತನೆ ಕೈಗೊಳ್ಳಲಾಗಿರುತ್ತದೆ. ತುಂಗಭದ್ರಾ, ಕೃಷ್ಣಾ, ಕಾವೇರಿ ಇತ್ಯಾದಿ ಪ್ರಮುಖ ಜಲಾಶಯಗಳಿಂದ ಅವಧಿಗಿಂತ ಮುಂಚಿತವಾಗಿ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಬಿಟ್ಟಿರುವುದರಿಂದ ಮುಂಚಿತವಾಗಿ ನಾಟಿ ಕೈಗೊಳ್ಳಲಾಗಿರುವುದು ಯೂರಿಯಾ ಮತ್ತು ರಸಗೊಬ್ಬರ ಬೇಡಿಕೆ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರು | ಪ್ರಶಸ್ತಿ ಸಮಾರಂಭ: ಶ್ರೀರಂಗಪಟ್ಟಣ ರೋಟರಿ ಕ್ಲಬ್‌ ಪ್ರಶಸ್ತಿಗೆ ಭಾಜನ

ಇಲಾಖೆಯ ಅಧಿಕಾರಿಗಳು ಪ್ರತಿ ಮಂಗಳವಾರ ಕೇಂದ್ರ ಸರ್ಕಾರದಿಂದ ಜರುಗಿಸುವ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೇ, ಕೇಂದ್ರ ಸರ್ಕಾರದ ರಸಗೊಬ್ಬರ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜ್ಯದಲ್ಲಿ ಅವಶ್ಯವಿರುವ ರಸಗೊಬ್ಬರ ಪೂರೈಕೆಗೆ ಅವಶ್ಯ ಕ್ರಮ ವಹಿಸುತ್ತಿದ್ದಾರೆ. ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ನ್ಯಾನೋ ರಸಗೊಬ್ಬರ ಬಳಕೆಗೆ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಿ ಅರಿವು ಮೂಡಿಸಲಾಗುತ್ತಿದೆ. ಬೆಳೆ, ಮಣ್ಣು, ಮಾನವ, ಜಾನುವಾರು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆಯನ್ನು ಕಡಿತಗೊಳಿಸಲು ರೈತರಲ್ಲಿ ಮನವಿ ಮಾಡಲಾಗಿದೆ. ಆರಂಭಿಕ ಶುಲ್ಕ ಪರಿಗಣಿಸದೆ ಕೊರತೆಯಾಗಿರುವ 81,000 ಮೆ.ಟನ್ ಡಿ.ಎ.ಪಿ. ಮತ್ತು 1,45,000 ಮೆ.ಟನ್. ಯೂರಿಯಾ ರಸಗೊಬ್ಬರವನ್ನು ಕೇಂದ್ರ ಸರ್ಕಾರವು ಪೂರೈಸಿದಲ್ಲಿ ರೈತರ ಬವಣೆ ನೀಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ಅಗತ್ಯ ಕ್ರಮ ಜರುಗಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...