ಬೆಂಗಳೂರು | ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ನಿವೃತ್ತ ಉದ್ಯೋಗಿಗಳಿಂದ ಉಪವಾಸ ಸತ್ಯಾಗ್ರಹ

Date:

Advertisements

ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.

ಶನಿವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ.ಆಚಾರ್ಯ, ಬ್ಯಾಂಕೇತರ ಸರಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೇತನದಲ್ಲಿನ ವಿಶೇಷ ಭತ್ಯೆಯ ಜೊತೆಗೆ ಪಿಂಚಣಿಯನ್ನು ಲೆಕ್ಕ ಹಾಕಲು ಪರಿಗಣಿಸುತ್ತಿಲ್ಲ. ಈ ಕಾರಣದಿಂದ, ಪಿಂಚಣಿಯನ್ನು ಸಂಬಳದ ಶೇ.50 ರಿಂದ 30ಕ್ಕೆ ಕಡಿತಗೊಳಿಸಲಾಗಿದೆ. ಹಣಕಾಸು ಸಚಿವಾಲಯದ ಸಲಹೆಯಂತೆ ನೀಡಲಾಗಿರುವ ವೈದ್ಯಕೀಯ ವಿಮಾ ಯೋಜನೆ ಮಾರ್ಗದರ್ಶನವನ್ನು ಕಾರ್ಯಗತಗೊಳಿಸಿಲ್ಲ. ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದರೂ, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಚಾರ್ಯ ಬೇಸರ ವ್ಯಕ್ತಪಡಿಸಿದರು.

2024-25ನೆ ಸಾಲಿನ ಎಕ್ಸ್ ಗ್ರೇಶಿಯಾ ಪುನರ್ ಪರಿಶೀಲನೆಯನ್ನು ಇದುವರೆಗೂ ಮಾಡಿಲ್ಲ. ವೇತನ ಒಪ್ಪಂದದ ಪ್ರಕಾರ ಖಾಸಗಿ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಎಕ್ಸ್ ಗ್ರೇಶಿಯಾವನ್ನು ಖಾಸಗಿ ಬ್ಯಾಂಕ್ ಆಡಳಿತಗಳು ಕೊಡುತ್ತಿಲ್ಲ. ಈ ತಾರತಮ್ಯವನ್ನು ಕೇಂದ್ರ ಸರಕಾರ ನಿವಾರಿಸಬೇಕು. ಸಾವಿರಕ್ಕಿಂತ ಕಡಿಮೆ ಬ್ಯಾಂಕ್ ನಿವೃತ್ತರು ಈ ಹಿಂದೆ ಪಿಂಚಣಿ ಆಯ್ಕೆ ಮಾಡದ ಕಾರಣ ಪಿಂಚಣಿಯಿಂದ ವಂಚಿತರಾಗಿದ್ದಾರೆ. ಅಂತಹ ಪ್ರಕರಣಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಪರಿಗಣಿಸಲಾಗಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಇದನ್ನು ವಿನಾಕಾರಣ ನಿರಾಕರಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ 80 ವರ್ಷ ದಾಟಿರುವ ಪಿಂಚಣಿದಾರರಿಗೆ ಬರುವ ಅಲ್ಪಮೊತ್ತದ ಪಿಂಚಣಿಯಿಂದ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಇಲ್ಲಿ ಉಪಾವಾಸ ಮಾಡುತ್ತಿರುವ ಅನೇಕರು ಡಯಾಬಿಟೀಸ್ ಮುಂತಾದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಎಸ್‌ಬಿಐ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಮೂಲ ವೇತನದ ಶೇ.50 ರಷ್ಟು ಪಿಂಚಣಿಯನ್ನು ಪೂರ್ವಾನ್ವಯಗೊಳಿಸಿ ನಿಗದಿ ಮಾಡಬೇಕು. ಹೊಸ ಪಿಂಚಣಿ ಯೋಜನೆಯ ಏರಿಳಿತಗಳು ಮತ್ತು ಅನಿಶ್ಚಿತತೆಗಳಿಂದ ರಕ್ಷಿಸುವ ಸಲುವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬೇಕು ಎಂದು ಆಚಾರ್ಯ ಒತ್ತಾಯಿಸಿದರು.

ಧರಣಿಯಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಪದಾಧಿಕಾರಿಗಳಾದ ಶಿವಪ್ರಕಾಶ್, ಎ.ಎನ್.ಕೃಷ್ಣಮೂರ್ತಿ, ಎಂ.ಆರ್.ಗೋಪಿನಾಥ್ ಸೇರಿದಂತೆ ನೂರಾರು ನಿವೃತ್ತ ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X