ದೊಡ್ಡಬಳ್ಳಾಪುರ | ತಹಶೀಲ್ದಾರ್ ಸಹಿ‌ ನಕಲು ಮಾಡಿ 63 ಲಕ್ಷ ರೂ. ಲೂಟಿ ಮಾಡಿದ ರೆವೆನ್ಯೂ ಇನ್ಸ್‌ಪೆಕ್ಟರ್

Date:

ತಹಶೀಲ್ದಾರರ ಸಹಿಯನ್ನು ನಕಲು ಮಾಡಿರುವ ರೆವೆನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ಮುಜುರಾಯಿ ಇಲಾಖೆಯ 63 ಲಕ್ಷ ರೂ.ಗಳನ್ನು ಲೂಟಿ ಮಾಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

- Advertisement -

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಆರ್‌ಐ ಹೇಮಂತ್ ಕುಮಾರ್ ಎಂಬಾತ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮತ್ತು ಕೇಸ್‌ ವರ್ಕರ್‌ ಸಹಿಯನ್ನು ನಕಲು ಮಾಡಿ, ಸೀಲ್‌ಗಳನ್ನು ಬಳಸಿಕೊಂಡು ಕಳೆದ 2 ವರ್ಷಗಳಲ್ಲಿ ಬರೋಬ್ಬರಿ 63 ಲಕ್ಷ ರೂ. ಹಣವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಜರಾಯಿ ಇಲಾಖೆಯ ಅಢಿಯಲ್ಲಿರುವ ದೇವಾಲಯಗಳ ಹಣ ಸರ್ಕಾರಕ್ಕೆ ಸಂದಾಯವಾಗಿಲ್ಲ ಎಂದು ಇತ್ತೀಚೆಗೆ ತಹಶೀಲ್ದಾರ್ ವಿಭಾ ಅವರಿಗೆ ದೂರು ಬಂದಿತ್ತು. ಆ ಬಗ್ಗೆ ತನಿಖೆ ನಡೆಸಲಾಗಿದ್ದು, ಮುಜರಾಯಿ ಇಲಾಖೆಗೆ ಸಂಬಂಧಿಸಿದ ಖಾತೆಯಲ್ಲಿ ಹಣ ಇಲ್ಲದಿರುವುದು ಪತ್ತೆಯಾಗಿದೆ. ಬಳಿಕ, ವಿಭಾ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ, ಆರ್‌ಐ ಹೇಮಂತ್ ಕುಮಾರ್ ಅವರೇ ಹಣವನ್ನು ಲೂಟಿ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೇಮಂತ್ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದು, ಸೇವೆಯಿಂದ ಅಮಾನತು ಮಾಡಲಾಗಿದೆ.

ಹೇಮಂತ್ ಕುಮಾರ್ ಬೆಂಗಳೂರಿನ ಮಹಿಳೆಯೊಬ್ಬರ ಖಾತೆಗೆ ನಿರಂತರವಾಗಿ ಹಣ ವರ್ಗಾವಣೆ ಮಾಡಿದ್ದು, ಆ ಖಾತೆಯಿಂದ ಮತ್ತೊಂದು ಖಾತೆಗೆ ಹಣವನ್ನು ವರ್ಗಾಯಿಸಿದ್ದಾರೆ ಎಂಬುದು ಪೊಲೀಸ್‌ ತನಿಖೆಯಲ್ಲಿ ಗೊತ್ತಾಗಿದೆ. ಆ ಹಣದಿಂದ ಆರೋಪಿ ಹೇಮಂತ್ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...