ಬೆಂಗಳೂರು ಗ್ರಾಮಾಂತರ | ಮದ್ಯದಂಗಡಿ ತಪಾಸಣೆ; 10 ಲಕ್ಷ ರೂ. ಮೌಲ್ಯದ ಮದ್ಯ ವಶ

Date:

  • ಮದ್ಯದಂಗಡಿ ಮೇಲೆ ಅಬಕಾರಿ ಇಲಾಖೆ ಅಧಿಕಾರಗಳ ದಾಳಿ
  • ಸುಧಾಕರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲು

ವಿಧಾನಸಭೆ ಚುನಾವಣೆ ಹಿನ್ನೆಲೆ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗಳ ಮೇಲೆ ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದು, ಮದ್ಯದ ಅಂಗಡಿಯೊಂದರಲ್ಲಿ ದಾಖಲೆ ಇಲ್ಲದೆ ಹೆಚ್ಚುವರಿಯಾಗಿ ಸಂಗ್ರಹಿಸಿದ್ದ ₹10 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. 

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಕಾಡಾನೆ ದಾಳಿ; ಯುವತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಯಲಿಯೂರಿನಲ್ಲಿರುವ ಸಿಎಲ್‌ 2 ಮದ್ಯದಂಗಡಿ ಮೇಲೆ ದೇವನಹಳ್ಳಿ ಅಬಕಾರಿ ಇಲಾಖೆ ಇನ್‌ಸ್ಪೆಕ್ಟರ್‌ ಬಿ ಎಂ ಸುನೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಸ್ಟಾಕ್‌ ಪರಿಶೀಲನೆ ಮಾಡುವಾಗ ಲೆಕ್ಕವಿಲ್ಲದ 1,192 ಲೀಟರ್‌ ಮದ್ಯ ಹಾಗೂ 1,388 ಲೀಟರ್ ಬಿಯರ್‌ ಬಾಟಲಿಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೆಚ್ಚುವರಿ ದಾಸ್ತನಿಗೆ ಸಂಬಂಧಿಸಿದಂತೆ ಸುಧಾಕರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...