ಬೆಂಗಳೂರು | ವಿಪರೀತ ಮಳೆ : ಅ.16ರಂದು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

Date:

ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್ ಜಿ ಅವರು, “ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಅಕ್ಟೋಬರ್ 16,17ರಂದು ಹವಾಮಾನ ಇಲಾಖೆಯ ಅಧಿಕಾರಿಗಳು ಆರೆಂಜ್ ಅಲರ್ಟ್ ಮುನ್ಸೂಚನೆ ಕೂಡ ನೀಡಿದ್ದಾರೆ. ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ, ಆದೇಶಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ರಾಯಚೂರು | ನ.23-24: ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ಕೂಡ ಇದೇ ವೇಳೆ ಜಿಲ್ಲಾಡಳಿತ ನೀಡಿದೆ.

  1. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
  2. ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
  3. ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ, ನಷ್ಟವನ್ನು ಸರಿದೂಗಿಸಬೇಕು.
  4. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗರೂಕತೆ ವಹಿಸುವುದು.
  5. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
  6. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿದೆ.
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...