ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನ.15ರಂದು ಸಾಂಸ್ಕೃತಿಕ ಸ್ಪರ್ಧೆ

Date:

ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನವೆಂಬರ್ 15ರಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಬೆಂಗಳೂರು ನಗರ ಘಟಕ ವತಿಯಿಂದ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ತೀರ್ಥಹಳ್ಳಿ ತಿಳಿಸಿದ್ದಾರೆ.

- Advertisement -

ಬೆಂಗಳೂರಿನ ಬಿಫ್ಟ್‌ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯುವಕರಲ್ಲಿ ಉತ್ಸಾಹ, ಸಕಾರಾತ್ಮಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಚೇತನವನ್ನು ಕಲಾ ಮತ್ತು ಮನರಂಜನೆಯ ಮೂಲಕ ಉತ್ತೇಜಿಸುವುದಕ್ಕೆ ಈ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕಿರಾಅತ್, ಕುರ್‌ಆನ್ ಪಠಣ, ಪ್ರವಾದಿಯವರ ಪ್ರಶಂಸೆಯ ಹಾಡುಗಳು, ದೇವರ ಪ್ರಶಂಸೆಯ ಕೀರ್ತನೆಯ ಹಾಡುಗಳು, ಶಾಯರಿ ಸ್ಪರ್ಧೆ ನಡೆಯಲಿದೆ. ವಿಜೇತರಾಗುವವರಿಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಬೆಂಗಳೂರು ನಗರ ಘಟಕ ವತಿಯಿಂದ ಪ್ರಥಮ ಬಂದವರಿಗೆ 25 ಸಾವಿರ, ದ್ವಿತೀಯ 15 ಸಾವಿರ ಹಾಗೂ ತೃತೀಯ ಬಹುಮಾನವಾಗಿ 10 ಸಾವಿರ ನಗದು ಮತ್ತು 4 ಮತ್ತು 5ನೇ ಸ್ಥಾನ ಪಡೆದವರಿಗೆ 5 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿಯನ್ನು ನೀಡಲಾಗುವುದು. 14ರಿಂದ 40 ವರ್ಷ ವಯಸ್ಸಿನವರು ಇದರಲ್ಲಿ ಭಾಗವಹಿಸಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊದಲು ತಮ್ಮ ಹಾಡುಗಳನ್ನು ನವೆಂಬರ್ 9ರೊಳಗೆ ನಮಗೆ ತಮ್ಮ ಆಡಿಯೋಗಳನ್ನು ಕಳುಹಿಸಬೇಕು. ಉತ್ತಮ ಐದು ಹಾಡುಗಾರರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಲಿದೆ. ಆಯ್ಕೆಯಾದವರು ನವೆಂಬರ್ 14ರಂದು ನಡೆಯುವ ಕಾರ್ಯಕ್ರಮದ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಅಲ್ಲಿ ವಿಜೇತರ ಆಯ್ಕೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜೈಪುರದ ಪ್ರಸಿದ್ಧ ಗಾಯಕರಾದ ಡಾ. ಹೈದರ್ ಸೈಫ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅವರು ತೀರ್ಪುಗಾರರಾಗಿ ಕೂಡ ಸಹಕರಿಸಲಿದ್ದಾರೆ ಎಂದು ಇಸ್ಮಾಯೀಲ್ ತೀರ್ಥಹಳ್ಳಿ ತಿಳಿಸಿದರು.

“ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ನೀಡಿರುವ ಬಾರ್ ಕೋಡ್ ಮೂಲಕ ನೋಂದಣಿ ಮಾಡಬೇಕು. ನವೆಂಬರ್ 9ರೊಳಗೆ ಆಡಿಯೋಗಳನ್ನು ಕಳುಹಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 99809 06632 ಅಥವಾ 9986921165 ಮೊಬೈಲ್ ನಂಬರನ್ನು ಸಂಪರ್ಕಿಸಬಹುದು” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ರಾಜ್ಯಾಧ್ಯಕ್ಷರಾದ ಡಾ. ನಸೀಂ ಅಹ್ಮದ್, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಸುಹೈಲ್ ಅಹ್ಮದ್, ಸುಹೈಲ್ ಮಸೂಲ್ಧಾರ್, ಸಯೀದ್ ಬಾಗ್ಬಾನ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...