ಬೆಂಗಳೂರು | ಏಕಾಏಕಿ ಮನೆ ಡೆಮಾಲಿಷನ್‌; ಬೀದಿಗೆ ಬಿದ್ದ 30ಕ್ಕೂ ಹೆಚ್ಚು ಕುಟುಂಬಗಳು

Date:

ಆರು ದಿನಗಳ ಹಿಂದೆ ರೈಲ್ವೆ ಇಲಾಖೆಯ ಏಕಾಏಕಿ ಡೆಮಾಲಿಷನ್ ಕಾರ್ಯದಿಂದ ಬೆಂಗಳೂರಿನ ಕೆಜೆ ಹಳ್ಳಿಯ 30ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಿವೆ.

- Advertisement -

ಒಂದು ದಿನದ ಮುಂಚೆಯಾದರೂ ನೋಟಿಸ್‌ ನೀಡಿದ್ದರೆ, ಮನೆಯಲ್ಲಿ ಇದ್ದ ವಸ್ತುಗಳನ್ನಾದರೂ ತೆಗೆದುಕೊಳ್ಳಬಹುದಿತ್ತು, ಆದರೆ ಒಂದು ದಿನವೂ ಸಮಯ ಕೊಡಲಿಲ್ಲ. ಬಡವರ ಮೇಲೆ ದರ್ಪ ತೋರಿಸಲು 700 ಪೊಲೀಸರು ಬೇಕಾ? ನಮಗೆ ಬಟ್ಟೆ ಬದಲಾಯಿಸಲು ಜಾಗವಿಲ್ಲ, ಮಕ್ಕಳಿಗೆ ಕುಡಿಯಲು ನೀರಿಲ್ಲ. ವಾರದಿಂದ ರೈಲ್ವೇ ಹಳಿಯ ಪಕ್ಕದಲ್ಲೇ ಬದುಕುವಂತಾಗಿದೆ ಎಂದು ಸೂರು ಕಳೆದುಕೊಂಡ ಸಂತ್ರಸ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಡೆಮಾಲಿಷನ್ ದಿನ ಮಹಿಳೆಯರ ಮೇಲೂ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ನಮ್ಮ ಮನೆಯು ತಾತನ ಕಾಲದಿಂದಲೂ ಇಲ್ಲಿದೆ, ನಾವು ವಾಸಕ್ಕೆ ಬಂದಾಗ ರೈಲ್ವೆ ಗೇಟ್ ಕೂಡ ಇರಲಿಲ್ಲ. ಆದರೆ ಇಂದು ಹೊಸ ರೈಲ್ವೆ ಹಳಿ ಹೆಸರಿನಲ್ಲಿ ನಮ್ಮ ಸೂರುಗಳನ್ನು ನೆಲಸಮ ಮಾಡಲಾಗಿದೆ. ನಮಗೆ ರೈಲ್ವೆ ಇಲಾಖೆಯ ಮೇಲೆ ಬೇಸರ ಇಲ್ಲ, ಆದರೆ ಜನಪ್ರತಿನಿಧಿಗಳ ಮೌನವೇ ನೋವು. ನಮ್ಮ ವಿಷಯ ಯಾರಿಗೂ ಗೊತ್ತಿಲ್ಲದಂತೆ ಮಾಡಲಾಗಿದೆ” ಎಂದು ನಿವಾಸಿಗಳು ವಿಷಾದಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

ಕೆ.ಜೆ.ಹಳ್ಳಿ ನಿವಾಸಿಗಳ ಪ್ರಕಾರ, ಒಂದು ತಿಂಗಳ ಹಿಂದೆ ಹೊಸ ಟ್ರ್ಯಾಕ್ ನಿರ್ಮಾಣದ ನೋಟಿಸ್ ನೀಡಲಾಗಿತ್ತು. ಅದಾದ ಬಳಿಕ ಏಕಾಏಕಿ 25ಕ್ಕೂ ಹೆಚ್ಚು ಮನೆಗಳನ್ನ ನೆಲಸಮಗೊಳಿಸಲಾಗಿದೆ. ಈಗ ಟ್ರ್ಯಾಕ್ ಪಕ್ಕದ ಚಿಕ್ಕ ಗುಡಾರಗಳೇ ಇವರ ಮನೆಗಳು. ಮಕ್ಕಳು ಶಾಲೆ ಬಿಟ್ಟಿದ್ದಾರೆ, ವೃದ್ಧರಿಗೆ ಔಷಧಿ ಸಿಗುತ್ತಿಲ್ಲ. ರೈಲ್ವೆ ಇಲಾಖೆಯ ಕ್ರಮದ ವಿರುದ್ಧ ನಿವಾಸಿಗಳು ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...