ಬೆಂಗಳೂರು | ಯುವ ಸಬಲೀಕರಣಕ್ಕೆ ಉಬರ್ ಹೊಸ ಯೋಜನೆ; ಚಾಲನೆ ತರಬೇತಿ & ಪ್ರವಾಸಿ ಗೈಡ್ ಕೌಶಲ್ಯ

Date:

ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿಯೊಂದಿಗೆ ಉಬರ್ ಇಂಡಿಯಾ ಹೊಸದೊಂದು ಯೋಜ‌ನೆ‌ಯನ್ನು ಜಾರಿಗೆ‌ ತರಲು ಮುಂದಾಗಿದೆ. ಈ ಯೋಜನೆಯಡಿ ಯುವಕರಿಗೆ ಚಾಲನೆ ತರಬೇತಿ ನೀಡುವುದರ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಉದ್ದೇಶ ಹೊಂದಿದೆ.

- Advertisement -

ಈ ನಿಟ್ಟಿನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರೊಂದಿಗೆ ಉಬರ್‌ನ ಏಷ್ಯಾ ಪೆಸಿಫಿಕ್‌ನ ಸಾರ್ವಜನಿಕ ನೀತಿ ಮುಖ್ಯಸ್ಥ ಮೈಕ್ ಆರ್ಗಿಲ್ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರ”ವಾಸೋದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಚಾಲಕರನ್ನು ಸಜ್ಜುಗೊಳಿಸುವುದು ವಿಶೇಷವಾಗಿ ತಳ ಸಮುದಾಯದ ಯುವಕರಿಗೆ ಆದಾಯದ ಅವಕಾಶಗಳನ್ನು ಒದಗಿಸುವುದು ಹಾಗೂ ಸಬಲೀಕರಣಕ್ಕೆ ಆದ್ಯತೆ ನೀಡುವ ಯೋಜನೆ ಇದಾಗಿದೆ” ಎಂದು ಹೇಳಿದರು.

“ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರಸ್ತುತ ಅಭ್ಯರ್ಥಿಗಳಿಗೆ ಲಘು ಮತ್ತು ಭಾರೀ ವಾಹನ ಚಾಲನೆ ತರಬೇತಿ ನೀಡುತ್ತದೆ. 100ಕ್ಕೂ ಹೆಚ್ಚು ತರಬೇತಿ ಪಡೆದ ಚಾಲಕರು ಈಗಾಗಲೇ ಭಾರತ ಮತ್ತು ವಿದೇಶಗಳಲ್ಲಿ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಬರ್ ಸಂಸ್ಥೆ ಗಳಿಕೆಯ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು “ಚಾಲಕ-ಕಮ್-ಪ್ರವಾಸಿ ಮಾರ್ಗದರ್ಶಿ” ಮಾದರಿಯನ್ನು ಪ್ರಸ್ತಾಪಿಸಿದೆ.

“ತಂತ್ರಜ್ಞಾನ ಮತ್ತು ಪ್ರವಾಸೋದ್ಯಮದಾದ್ಯಂತ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲು ವಿವಿಧ ಕೌಶಲ್ಯ ಯೋಜನೆಗಳನ್ನು ನಾವು ಚರ್ಚಿಸಿದ್ದೇವೆ, ಕರ್ನಾಟಕದಲ್ಲಿ ಹೇರಳ ಪ್ರವಾಸೋದ್ಯಮ ತಾಣಗಳಿವೆ. ಅಲ್ಲಿ ಉತ್ತಮ ತರಬೇತಿ ಪಡೆದ ಕ್ಯಾಬ್ ಚಾಲಕರು ಇದ್ದರೆ ಪ್ರವಾಸಿ ಮಾರ್ಗದರ್ಶಿಯಾಗಿಯೂ ಕಾರ್ಯನಿರ್ವಹಿಸಬಹುದು” ಎಂದು ಆರ್ಗಿಲ್ ಹೇಳಿದರು.

ನಂತರ ಸಚಿವ ಡಾ. ಪಾಟೀಲ್ ಮಾತನಾಡಿ, “ಚಾಲಕ ತರಬೇತಿಯಲ್ಲಿ ವಿಶೇಷ ಕೌಶಲ್ಯಗಳನ್ನು ಸಂಯೋಜಿಸುವುದು ಪ್ರಯೋಜನಕಾರಿ. ಇದೊಂದು ಉತ್ತಮ ಯೋಜನೆ ಎಂದು ಸ್ವಾಗತಿಸಿದರು ಮತ್ತು ಮಂಡಳಿಯ ಮುಂದಿನ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಲಾಗುವುದು” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಬೆಂಗಳೂರು | ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಹೈವಿಷನ್ ಇಂಡಿಯಾ, ಸುಧಾರಿತ ತಾಂತ್ರಿಕ ತರಬೇತಿಗಾಗಿ ಜಿಟಿಟಿಸಿ ಜೊತೆ ಒಪ್ಪಂದ: ಮತ್ತೊಂದು ಸಭೆಯಲ್ಲಿ, ಐಫೋನ್ ತಯಾರಕ ಫಾಕ್ಸ್‌ಕಾನ್‌ಗೆ ಕ್ಯಾಮೆರಾ ಪರಿಕರಗಳನ್ನು ಒದಗಿಸುವ ಕೊರಿಯನ್ ಸಂಸ್ಥೆಯಾದ ಹೈವಿಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸಚಿವ ಡಾ. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.

ತಾಂತ್ರಿಕ ತರಬೇತಿ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಯಾಂತ್ರೀಕೃತತೆ, ನಿಖರ ಯಂತ್ರೋಪಕರಣ ಮತ್ತು ಸಲಕರಣೆಗಳ ಜೋಡಣೆಯಂತಹ ಕ್ಷೇತ್ರಗಳಲ್ಲಿ ಸೌಲಭ್ಯಗಳ ಹಂಚಿಕೆಯಲ್ಲಿ ಸಹಕಾರಕ್ಕಾಗಿ ಈ ಒಪ್ಪಂದವು ಅವಕಾಶವನ್ನು ಒದಗಿಸುತ್ತದೆ.

ಒಪ್ಪಂದಕ್ಕೆ ಹೈವಿಷನ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಲೀ ಯುನ್ಹೋ ಮತ್ತು ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಸಹಿ ಹಾಕಿದರು. ಎರಡೂ ಸಂಸ್ಥೆಗಳು ಅರ್ಹ ಜಿಟಿಟಿಸಿ ಪ್ರಶಿಕ್ಷಣಾರ್ಥಿಗಳಿಗೆ ಕೈಗಾರಿಕಾ ಮಾನ್ಯತೆ, ಇಂಟರ್ನ್‌ಶಿಪ್ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಸಮ್ಮತಿಸಿವೆ. ಜೊತೆಗೆ ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಕೈಗಾರಿಕಾ ಸೌಲಭ್ಯಗಳು ಮತ್ತು ಪ್ರಾತ್ಯಕ್ಷಿಕೆ ಸಲಕರಣೆಗಳನ್ನು ಪೂರೈಸಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...