ಯುಗಾದಿ ಹಾಗೂ ರಂಜಾನ್ ಹಬ್ಬಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಪ್ರಯುಕ್ತ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ತೀರ್ಮಾನಿಸಿದೆ.
ಮಾರ್ಚ್ 28 ರಿಂದ 30 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗಳಿಗೆ, ಹೊರ ರಾಜ್ಯಗಳಿಗೆ ಹಾಗೂ ಮಾರ್ಚ್ 31ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್‌ಗಳು ಓಡಾಡಲಿವೆ ಎಂದು ನಿಗಮ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಪಿಕಪ್, ಡ್ರಾಪ್ ಪಾಯಿಂಟ್ ಸೇರಿದಂತೆ ಟಿಕೆಟ್ ಮೇಲೆ ನಮೂದಾಗಿರುವ ಮಾಹಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಕೋರಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು
ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ಇ-ಟಿಕೆಟ್ ಕಾಯ್ದಿರಿಸಲು ನಿಗಮದ ಅಧಿಕೃತ ವೆಬ್‌ಸೈಟ್ www.ksrtc.karnataka.gov.inನ್ನು ಸಂಪರ್ಕಿಸಬೇಕು. ಒಮ್ಮೆಗೆ ನಾಲ್ಕು ಅಥವಾ ಹೆಚ್ಚು ಟಿಕೆಟ್‌ಗಳನ್ನು ಬುಕ್ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೇ ಕಾಯ್ದಿರಿಸಿದಲ್ಲಿ ವಾಪಸ್ಸಾಗುವ ದರದಲ್ಲಿ ಶೇ.10 ರಷ್ಟು ರಿಯಾಯಿತಿ ದೊರೆಯಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.