ಬೆಂ.ನಗರ | ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ; 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ

Date:

Advertisements

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್‌ ಮಂಜುನಾಥ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಚಂದಾಪುರ ಪುರಸಭೆ ವ್ಯಾಪ್ತಿ ಇಗ್ಗಲೂರು ಬಳಿ ₹290ಕೋಟಿ ವೆಚ್ಚದಲ್ಲಿ 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಆಯುಷ್ಮಾನ್‌ ಭಾರತ್‌ ಯೋಜನೆ ಖಾಸಗಿ ಆಸ್ಪತ್ರೆಯಲ್ಲೂ ಸಿಗಬೇಕು. ಇದಕ್ಕೆ ರಾಜ್ಯ ಸರ್ಕಾರ ಕೆಲವು ಬದಲಾವಣೆ ತಂದು ಸಹಕಾರ ನೀಡಬೇಕು. ಇದರಿಂದ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

Advertisements

ಆಸ್ಪತ್ರೆ ವಿಶೇಷತೆ: ಐದು ಎಕರೆ ಪ್ರದೇಶದಲ್ಲಿ ಏಳು ಮಹಡಿ ಆಸ್ಪತ್ರೆ, ಆಸ್ಪತ್ರೆ ಉದ್ಯೋಗಿಗಳಿಗೆ ವಸತಿ ಗೃಹ, ಕ್ಯಾಂಟೀನ್‌ ಸೇರಿದಂತೆ ಸುಸಜ್ಜಿತ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದಿದ್ದಾರೆ.

ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಇಎಸ್‌ಐ ಆಸ್ಪತ್ರೆ ತಾಲೂಕಿನಲ್ಲಿ ಸ್ಥಾಪಿತವಾಗಿದ್ದು, ಐದು ಎಕರೆ ಪ್ರದೇಶದಲ್ಲಿ ಏಳು ಮಹಡಿ ಆಸ್ಪತ್ರೆ, ಆಸ್ಪತ್ರೆ ಉದ್ಯೋಗಿಗಳಿಗೆ ವಸತಿ ಗೃಹ ಕ್ಯಾಂಟೀನ್‌ ಸೇರಿದಂತೆ ಸುಸಜ್ಜಿತ ಸೌಲಭ್ಯವುಳ್ಳ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬೊಮ್ಮಸಂದ್ರ, ಜಿಗಣಿ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಐದು ಕೈಗಾರಿಕಾ ಪ್ರದೇಶಗಳಿವೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪಟಾಕಿಗೆ ಹೆಚ್ಚು ಮಹತ್ವ ನೀಡದೆ ಪರಿಸರ ಉಳಿಸಿ: ಜಯ ಕರ್ನಾಟಕ ಪರಿಷತ್‌ ಮುಖಂಡ ನಾರಾಯಣ್‌

ಕೈಗಾರಿಕಾ ಪ್ರದೇಶಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ. ವಾರ್ಷಿಕ ₹140 ಕೋಟಿಗೂ ಹೆಚ್ಚು ಹಣ ಇಎಸ್‌ಐಗೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದಲೇ ಜಮೆಯಾಗುತ್ತಿದೆ. ಬಹುದಿನಗಳ ಕಾರ್ಮಿಕರ ಬೇಡಿಕೆ ಈಡೇರಿದಂತಾಗಿದ್ದು, ಎರಡೂವರೆ ವರ್ಷಗಳಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X