ಬೆಂಗಳೂರು ಗ್ರಾಮಾಂತರ | ನಂದಿ ಬೆಟ್ಟಕ್ಕೆ ಪ್ರವಾಸ ಹೋಗಿದ್ದ ನಾಲ್ವರು ನೀರು ಪಾಲು

Date:

ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಪ್ರವಾಸ ಹೋಗಿದ್ದ ನಾಲ್ವರು ಸ್ನೇಹಿತರು ಬಿಸಿಲಿನ ಕಾರಣ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ರಾಮನಾಥಪುದರಲ್ಲಿ ನಡೆದಿದೆ.

ಫಿರೋಜ್ ಖಾನ್, ಶಹೀದ್ ಇಸ್ಮಾಯಿಲ್, ಶೇಖ್ ತಾಹಿರ್, ತೋಹಿದ್ ಮುನೀರ್ ಮೃತ ದುರ್ದೈವಿಗಳು. ಭಾನುವಾರ ರಜಾದಿನವಾದ್ದರಿಂದ ಬೆಳಗ್ಗೆ ನಂದಿಬೆಟ್ಟಕ್ಕೆ ಬಂದ ನಾಲ್ವರು, ಮಧ್ಯಾಹ್ನ ವಾಪಸ್‌ ಬರುವಾಗ ಹೆಚ್ಚಿನ ಬಿಸಿಲು ಇದ್ದುದರಿಂದ 3 ಗಂಟೆ ಸಮಯದಲ್ಲಿ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ಈಜಲು ಹೋಗಿದ್ದಾರೆ.

ಈಜಾಡುವಾಗ ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗಿದ್ದಾರೆ. ಕೆರೆ ಮೇಲೆ ಬಟ್ಟೆಗಳನ್ನು ಕಂಡು ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಿದರು.

ಪೊಲೀಸರ ನೇತೃತ್ವದಲ್ಲಿ ಆಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ ವೇಳೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಸುದ್ದಿ ಓದಿದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...