ದೊಡ್ಡಬಳ್ಳಾಪುರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಸೋಮವಾರ ರಾತ್ರಿಯಿಂದ ಇಲ್ಲಿಯವರೆಗೆ 14 ಮಂದಿ ಮೇಲೆ ದಾಳಿ ನಡೆಸಿವೆ. ನಾಯಿಗಳ ಹಾವಳಿಯಿಂದ ಪಟ್ಟಣದ ಜನರು ಆತಂಕಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹತ್ತು ಮಕ್ಕಳು ಮತ್ತು ನಾಲ್ಕು ಪುರುಷರ ಮೇಲೆ ನಾಯಿಗಳು ದಾಳಿ ಮಾಡಿವೆ. ನಾಯಿ ಕಡಿತದಿಂದ ಗಾಯಗೊಂಡಿರುವ ಜನರು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಣಣದ ಟಿಬಿ ಸರ್ಕಲ್, ಕೋರ್ಟ್ ರಸ್ತೆ, ತಾಲೂಕು ಕಚೇರಿ ರಸ್ತೆ ಸೇರಿದಂತೆ ಹಲವೆಡೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಹಾದಿಯಲ್ಲಿ ಓಡಾಡುವವರ ಮೇಲೆ ದಾಳಿ ಮಾಡುತ್ತಿವೆ. ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.