ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದಿಂದ 2023ರ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

Date:

Advertisements
  • ಗಾಯಕಿ ಸಂಗೀತಾ ಕಟ್ಟಿ ಸೇರಿದಂತೆ 10 ಮಂದಿಗೆ ಪ್ರಶಸ್ತಿ ಪ್ರಧಾನ
  • ನಾನಾ ಕ್ಷೇತ್ರಗಳ ಸಾಧಕರನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶ

“ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ-2023 ಹಾಗೂ ಯುವ ತಾರೆ ಪ್ರಶಸ್ತಿ-2023 ನೀಡಲು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ನಿರ್ಧರಿಸಿದೆ. ದಕ್ಷಿಣ ಭಾರತದಲ್ಲಿ ಮೂರನೇ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದು ಸಂಘದ ಮುಖಂಡ ಉಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಮತ್ತು ಕಬ್ಬನ್ ಪಾರ್ಕ್ ನಡಿಗೆದಾರರ ಫೋರಂ ಸಂಯುಕ್ತಾಶ್ರಯದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು 2023ರ ಅಕ್ಟೋಬರ್ 8ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.

“ಯುವ ಪ್ರತಿಭಾವಂತರನ್ನು ಗುರುತಿಸುವುದು, ಅವರನ್ನು ಸಬಲೀಕರಣಗೊಳಿಸುವುದು, ಪ್ರೇರೇಪಿಸುವುದು ಮತ್ತು ನಾನಾ ಕ್ಷೇತ್ರಗಳಲ್ಲಿನ ಸಾಧಕರನ್ನು ಪ್ರೋತ್ಸಾಹಿಸುವುದು ಪ್ರಶಸ್ತಿ ಮತ್ತು ಕಾರ್ಯಕ್ರಮದ ಉದ್ದೇಶವಾಗಿದೆ” ಎಂದು ಹೇಳಿದರು.

Advertisements

“ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘವು ಪರಿಸರವನ್ನು ಸಂರಕ್ಷಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಬೆಂಗಳೂರಿನ ಅತ್ಯಂತ ಜನಪ್ರಿಯ ಉದ್ಯಾನವನ ಕಬ್ಬನ್ ಪಾರ್ಕ್‌ನ ಸಮೃದ್ಧ ಹಸಿರನ್ನು ಉಳಿಸಿಕೊಂಡಿದೆ. ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಿದ ಮಹಿಳೆಯರು, ಯುವ ಪ್ರತಿಭೆಗಳು ಹಾಗೂ ಸಾಧಕರು ಎಂದು ನಾವು ಬಲವಾಗಿ ನಂಬಿರುವುದರಿಂದ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ | ಪ್ರಮಾಣ ವಚನ ಸ್ವೀಕರಿಸಿದ ಮೂವರು ನೂತನ ಸದಸ್ಯರು

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘದ ಮುಖಂಡ ಉಮೇಶ್, “ಕಳೆದ ಮೂರು ವರ್ಷದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ. ಮೊದಲ ಬಾರಿಗೆ 2019ರಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕೋವಿಡ್ ಸಮಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರಲಿಲ್ಲ. ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಸಾಮಾಜಿಕ ಕಳಕಳಿ ಇರುವವರಿಗೆ ಪುನೀತ್ ಪ್ರಶಸ್ತಿಯನ್ನು ಕಳೆದ ವರ್ಷದಿಂದ ನೀಡುತ್ತಿದ್ದೇವೆ. ಈ ಬಾರಿ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಸಂಗೀತಾ ಕಟ್ಟಿ, ವೈದ್ಯಕೀಯ ಕ್ಷೇತ್ರದಿಂದ ಸುಜಾತಾ ರಾಥೋಡ್, ಪತ್ರಕರ್ತೆ ಪದ್ಮಾ, ಡಿಜಿಟಲ್ ಮೀಡಿಯಾದಿಂದ ನಿರುಪಮಾ ಸೇರಿದಂತೆ 10 ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X