- ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪಾಸ್
- ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಉತ್ತೀರ್ಣ
ಮೇ 25ರಿಂದ ಜೂ.3ರವರೆಗೆ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮುಂದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಂಗಳವಾರ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ವಿಕ್ಷೀಸಬಹುದಾಗಿದೆ.
ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆದ ಪೂರಕ ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು (ಶೇ.32) ಉತ್ತೀರ್ಣರಾಗಿದ್ದಾರೆ. ಒಟ್ಟು 62,111 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಿದ್ದರು. ಈ ಪೈಕಿ 21,577 ವಿದ್ಯಾರ್ಥಿನಿಯರು (ಶೇ.34.74) ಉತ್ತೀರ್ಣರಾಗಿದ್ದಾರೆ. 95,645 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 28,901 ಬಾಲಕರು (ಶೇ.30.22) ಉತ್ತೀರ್ಣರಾಗಿದ್ದಾರೆ.
ನಗರ ಪ್ರದೇಶದ ಶೇ.32.69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಪೂರಕ ಪರೀಕ್ಷೆಗೆ ಕಲಾ ವಿಭಾಗದ 70,952 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 20,318 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಆ ಮೂಲಕ ಶೇ.28.64ರಷ್ಟು ಪಾಸಿಂಗ್ ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದ ಪರೀಕ್ಷೆಗೆ ಹಾಜರಾದ ಒಟ್ಟು 34.293 ವಿದ್ಯಾರ್ಥಿಗಳಲ್ಲಿ 13,236 ವಿದ್ಯಾರ್ಥಿಗಳು (ಶೇ.38.60) ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 34,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 16,924 ಮಂದಿ ಪಾಸ್ ಆಗಿದ್ದಾರೆ. ಶೇ.32.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಪೂರಕ ಪರೀಕ್ಷೆಯಲ್ಲಿ ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹಾಗೂ ಶೇ.35.10ರಷ್ಟು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
304 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಿಂದ ಜೂನ್ 3ರವರೆಗೆ ಪರೀಕ್ಷೆಯನ್ನು ನಡೆಸಲಾಗಿದೆ. ಬೆಂಗಳೂರಿನಲ್ಲಿ 10 ಮೌಲ್ಯಮಾಪನ ಶಿಬಿರಗಳಲ್ಲಿ ಜೂನ್ 9 ರಿಂದ ಜೂನ್ 14ರವರೆಗೆ 3,401 ಮೌಲ್ಯಮಾಪಕರು ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಗರಕ್ಕೆ ತಂಪೆರೆದ ಮಳೆ; ವಿವಿಧೆಡೆ ಸಂಚಾರ ದಟ್ಟಣೆ
ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ಜು ಮೇ 23 ರಿಂದ ಜೂನ್ 03 ರವರೆಗೆ ನಡೆಸಲಾಗಿತ್ತು. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.64 ರಷ್ಟು ಫಲಿತಾಂಶ ದಾಖಲಾಗಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಲು ಬಯಸಿದ್ದ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.
ಫಲಿತಾಂಶ ನೋಡಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ.