ಶೇ.5 ರಿಯಾಯಿತಿ ಆಸ್ತಿ ತೆರಿಗೆ ಅವಧಿ ವಿಸ್ತರಣೆ: ಬಿಬಿಎಂಪಿ

Date:

Advertisements
  • ಬೆಂಗಳೂರಿನ ನಾಗರಿಕರಿಗೆ “ಉಡುಗೊರೆ” ಎಂದ ಉಪಮುಖ್ಯಮಂತ್ರಿ ಡಿಕೆಶಿ
  • ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಿಯಾಯಿತಿ ಅವಧಿ ವಿಸ್ತರಣೆ ಮಾಡಿರಲಿಲ್ಲ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರು ಜೂನ್ ಅಂತ್ಯದ ಅವಧಿವರೆಗೆ ಶೇ. 5ರಷ್ಟು ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸಬಹುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರ ಆದೇಶದ ಮೇರೆಗೆ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪಾಲಿಕೆ ಹೇಳಿದೆ.

ಶೇ. 5ರಷ್ಟು ರಿಯಾಯಿತಿ ಆಸ್ತಿ ತೆರಿಗೆ ಏಪ್ರಿಲ್ ಅಂತ್ಯಕ್ಕೆ ಅವಧಿ ಮುಗಿದಿದೆ. ಈ ರಿಯಾಯಿತಿಯನ್ನು ಜೂನ್ ಪೂರ್ಣ ತಿಂಗಳಿಗೆ ವಿಸ್ತರಿಸಲಾಗಿದೆ. ಜೂನ್ 30 ಅಥವಾ ಅದಕ್ಕಿಂತ ಮೊದಲು ಆಸ್ತಿ ತೆರಿಗೆ ಪಾವತಿಸುವ ಮಾಲೀಕರಿಗೆ ರಿಯಾಯಿತಿ ಅನ್ವಯಿಸುತ್ತದೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ಕ್ರಮವನ್ನು ಬೆಂಗಳೂರಿನ ನಾಗರಿಕರಿಗೆ “ಉಡುಗೊರೆ” ಎಂದಿದ್ದಾರೆ.

Advertisements

ಬಿಬಿಎಂಪಿ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ. 5ರಷ್ಟು ರಿಯಾಯಿತಿಯನ್ನು ನೀಡುತ್ತದೆ. ಒಂದು ತಿಂಗಳವರೆಗೆ ಅವಧಿ ವಿಸ್ತರಿಸಲಾಗುತ್ತದೆ. ಈ ವರ್ಷ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಅವಧಿ ವಿಸ್ತರಣೆ ಮಾಡಿರಲಿಲ್ಲ. ರಿಯಾಯಿತಿಯು ಆಸ್ತಿ ಮಾಲೀಕರಿಗೆ ಸಹಾಯ ಮಾಡುತ್ತದೆ. ಇದು ಬಾಕಿ ಉಳಿದಿರುವ ಬಿಲ್‌ಗಳನ್ನು ತೆರವುಗೊಳಿಸಲು ಸಹಾಯಕವಾಗುತ್ತದೆ.

ಗುರುವಾರ ಬೆಂಗಳೂರು ಅಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ ಮಾಜಿ ಮೇಯರ್‌ಗಳು ಆಸ್ತಿ ತೆರಿಗೆ ಮೇಲಿನ ಶೇ. 5ರಷ್ಟು ರಿಯಾಯಿತಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದರು. ಮೇ ತಿಂಗಳಲ್ಲಿ ಪಾವತಿ ಮಾಡಿದವರು ಮುಂದಿನ ವರ್ಷ ಪಾವತಿಸಿದಾಗ ಅವರ ಆಸ್ತಿ ತೆರಿಗೆಗೆ ಅನುಗುಣವಾಗಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

2023-24ರ ಬಜೆಟ್‌ನಲ್ಲಿ ಬಿಬಿಎಂಪಿಯು ಆಸ್ತಿ ತೆರಿಗೆಯಿಂದ ₹4,690 ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಆಸ್ತಿ ತೆರಿಗೆಯಿಂದ ₹3,332 ಕೋಟಿ ಸಂಗ್ರಹಿಸಿತ್ತು. ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಹೆಚ್ಚಿನ ತೆರಿಗೆ ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X