ವಂಚನೆ ಪ್ರಕರಣ | ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ: ಚೈತ್ರಾ ಕುಂದಾಪುರ

Date:

Advertisements

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ. ಈ ವೇಳೆ, ಚೈತ್ರಾ ಕುಂದಾಪುರ ಕಾರಿನಿಂದ ಇಳಿಯುವಾಗ, “ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗಡೆ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಆಚೆ ಬರುತ್ತೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವುದರಿಂದ ಈ ಷಡ್ಯಂತ್ರ ನಡೆದಿದೆ” ಎಂದು ಹೇಳುತ್ತಾ ಸಿಸಿಬಿ ಕಚೇರಿಯ ಒಳಗಡೆ ಹೋದರು.

ಎ1 ಆರೋಪಿ ನೀವೆ ಅಲ್ವಾ ಎಂದು ಪ್ರಶ್ನಿಸಿದ್ದಕ್ಕೆ, “ಆಗಿರಲಿ, ಸತ್ಯ ಹೊರಗಡೆ ಬರುತ್ತೆ” ಎನ್ನುತ್ತಾ ಕಚೇರಿಯ ಒಳಗಡೆ ಹೋದರು.

ಕೋಟ್ಯಾಂತರ ವಂಚನೆ ಪ್ರಕರಣ

Advertisements

ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ₹5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬಂಧಿಸಿದ್ದರು.

ಚೈತ್ರಾ ಕುಂದಾಪುರ, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಎಂಬವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಎಂಬುವವರು ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಪೂಜಾರಿ ಅವರಿಗೆ ₹5 ಕೋಟಿ ವಂಚಿಸಿದ್ದರು.

ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.

ಮಂಗಳವಾರ ಆರೋಪಿಗಳ ಬಂಧನದ ಬಳಿಕ, ಬುಧವಾರ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ನಂತರ, ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಸಿಸಿಬಿ ಪರ ವಕೀಲರು, “ಬಂಧಿತರಿಂದ ಹಣ ರಿಕವರಿ ಮಾಡಿಕೊಳ್ಳಬೇಕಿದೆ. ಹಾಗಾಗಿ, ಆರೋಪಿಗಳನ್ನು 10 ದಿನ ಪೊಲೀಸ್‌ ಕಸ್ಟಡಿ ವಶಕ್ಕೆ ನೀಡಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇದಕ್ಕೆ ಸಮ್ಮತಿಸಿದ ನ್ಯಾಯಾಲಯ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿಗೆ 14 ದಿನಗಳ ಕಾಲ ಅಂದರೆ, ಸೆ.​23 ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್‌ ಆದೇಶಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಗನ್ ಕಡೂರು ಎಂಬಾತನನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? 5 ಕೋಟಿ ವಂಚನೆ ಪ್ರಕರಣ: 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ

ಇನ್ನೂ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವಹಿವಾಟು ನಡೆದಿರುವ ಸ್ಥಳಗಳಾದ ಉಡುಪಿ, ಚಿಕ್ಕಮಗಳೂರು, ಕಲಬುರಗಿ ಹಾಗೂ ಬೆಂಗಳೂರಿನ ಕೆಲ ಭಾಗದಲ್ಲಿ ಮಹಜರು ನಡೆಸಲಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಸಿಸಿಬಿ ಪೊಲೀಸರು ಫ್ರೀಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಇನ್ನೂ ಹಲವು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನೊಬ್ಬ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.

ಸಿಸಿಬಿ ಪೊಲೀಸರು ಆರೋಪಿ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸ್ವಾಮೀಜಿ ಬಂಧನದ ಬಳಿಕ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರುವ ಸಾಧ್ಯತೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X