ಶಕ್ತಿ ಯೋಜನೆ | ಮೊದಲ ದಿನ: 5 ಲಕ್ಷ ಮಹಿಳೆಯರ ಪ್ರಯಾಣ

Date:

Advertisements
  • ಮೊದಲ ದಿನ ಮಹಿಳೆಯರು ಪ್ರಯಾಣಿಸಿದ ಒಟ್ಟು ಮೊತ್ತ ₹1,40,22,878 ಕೋಟಿ
  • ಲಕ್ಸುರಿ ಬಸ್‌ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ 5 ಗ್ಯಾರಂಟಿಗಳಲ್ಲಿ ಒಂದಾದ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಮೊದಲ ದಿನವೇ 5,71,023 ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

ಜೂ. 11 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು. ನಾಲ್ಕು ಸಾರಿಗೆ ನಿಗಮಗಳ ವಾಹನದಲ್ಲಿ ಒಟ್ಟಾರೆಯಾಗಿ 5,71,023 ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು ₹1,40,22,878 ಪ್ರಯಾಣಿಸಿದ ಮೊತ್ತವಾಗಿದೆ ಎಂದು ಸಾರಿಗೆ ನಿಗಮ ಮಾಹಿತಿ ನೀಡಿದೆ.

ರಾಜ್ಯ ಸಾರಿಗೆ ನಾಲ್ಕು ನಿಗಮಗಳ ಲಕ್ಸುರಿ ಬಸ್‌ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. 

Advertisements

ನಾಲ್ಕು ಸಾರಿಗೆ ನಿಗಮಗಳ ವಾಹನಗಳಲ್ಲಿ ಜೂನ್‌ 11ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ಮಹಿಳೆಯರು ಪ್ರಯಾಣಿಸಿದ ವಿವರಗಳನ್ನು ನಿಗಮ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ 1,93,831 ಮಹಿಳೆಯರು ಪ್ರಯಾಣಿಸಿದ್ದು, ₹58,16,178 ಪ್ರಯಾಣದ ಮೌಲ್ಯವಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್‌ಗಳಲ್ಲಿ 2,01,215  ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ₹26,19,604 ಮೊತ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ಬಸ್‌ ಖರೀದಿಗೆ ಮುಂದಾದ ಸಾರಿಗೆ ನಿಗಮ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲೂಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ 1,22,354 ಮಹಿಳೆಯರು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದು, ₹36,17,096 ಪ್ರಯಾಣದ ಮೊತ್ತವಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ಗಳಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದು, ₹19,70,000 ಪ್ರಯಾಣದ ವೆಚ್ಚವಾಗಿದೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X