ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

Date:

Advertisements
  • ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು
  • ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ

ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸ್ಟಂಟ್‌ ಅಳವಡಿಸುವ ಆಂಜಿಯೋಪ್ಲಾಸ್ಟಿ ಮಾಡಲಾಗುವುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ತಿಳಿಸಿದೆ. ​

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಮೆರಿಕದ ಮೆಡ್‌ಟ್ರಾನಿಕ್ಸ್, ವಿಸ್ಕಿನ್‌ಸನ್ ಸಂಸ್ಥೆ ಹಾಗೂ ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್‌ ಫೌಂಡೇಶನ್ ಸಹಯೋಗದೊಂದಿಗೆ 200 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದೆ.

ಈ ಕಾರ್ಯಗಾರವೂ ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ನಡೆಯಲಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಜೂನ್ 12 ರಿಂದ 14ರವರೆಗೆ, ಮೈಸೂರು ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 15 ರಿಂದ 16 ರವರೆಗೆ, ಕಲಬುರಗಿ ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 17 ರಿಂದ 18ರವರೆಗೆ ಕಾರ್ಯಾಗಾರ ನಡೆಯಲಿದೆ.

Advertisements

“ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯರ ನಾಗರಿಕರಿಗೆ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಅಳವಡಿಸಲಾಗುವುದು. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು” ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು. ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಸಮಯಾವಕಾಶ ಇರಲಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಹೆಸರು ದಾಖಲಾತಿಗಾಗಿ ಇಲ್ಲಿ ಸಂಪರ್ಕಿಸಿ

ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್ ಬೆಂಗಳೂರು.

ಬೆಂಗಳೂರು ಶಾಖೆ: ಮೊ. 9480827888, 080-26944874

ಮೈಸೂರು ಶಾಖೆ: 8660105492, 0821-2263255

ಕಲಬುರಗಿ ಶಾಖೆ: 9482114611, 08472-230511

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X