ಬಕ್ರೀದ್ ಹಬ್ಬ | ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ

Date:

Advertisements
  • ಅಧಿಕೃತ ಕಸಾಯಿಖಾನೆಗಳಲ್ಲಿ ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳ ವಧೆಗೆ ಅವಕಾಶ
  • ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ

ಜೂನ್ 29ರಂದು ಬಕ್ರೀದ್ ಹಬ್ಬದ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ಬಕ್ರೀದ್ ಹಬ್ಬ ಆಚರಣೆ/ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು/ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ಯಾವುದೇ ಸ್ಥಳಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಬಿಬಿಎಂಪಿ ನೀಷೇಧಿಸಿದೆ.

  • ಪಾಲಿಕೆ ಅಧಿನಿಯಮ 2020ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
  • ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರಿಗೆ ಆರು ತಿಂಗಳ ಸಜೆ ಅಥವಾ ದಂಡ ಎರಡೂ ವಿಧಿಸಬಹುದಾಗಿದೆ.
  • ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ.
  • ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 5 ವರ್ಷ ಜೈಲು ಶಿಕ್ಷೆ ಇದೆ ಎಂದು ಹೇಳಿದೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ/ಕುರ್ಬಾನಿ/ವಧೆ ಕೊಡುವುದನ್ನು ನಿಷೇಧಿಸಲಾಗಿದೆ.

Advertisements

ಬಲಿ/ ಕುರ್ಬಾನಿ/ ವಧೆಗಾಗಿ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಸಾಗಾಟ ಮಾಡುವುದೂ ಸಹ ಶಿಕ್ಷಾರ್ಹ ಅಪರಾಧವಾಗಿದೆ. ಸಾರ್ವಜನಿಕರು ಈ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಲಾಗಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | 2ನೇ ಹಂತದ ನಿರ್ಮಾಣಕ್ಕೆ ₹3,045 ಕೋಟಿ ನೆರವು ನೀಡಲು ಆರ್‌ಇಸಿ ಒಪ್ಪಿಗೆ

ಜತೆಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 8277100200ಗೆ ಕರೆ ಮಾಡಿ ದೂರು/ಮಾಹಿತಿ ನೀಡಬಹುದಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ಕೆ.ಪಿ ರವಿಕುಮಾರ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X